ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ (2024) 3ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಯಿತು. ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ನಡುವಣ ಈ ಪಂದ್ಯದಲ್ಲಿ ಸಿಕ್ಸ್-ಫೋರ್ಗಳ ಸುರಿಮಳೆಯಾಗಿತ್ತು. ಕೆಕೆಆರ್ ಪರ ಆ್ಯಂಡ್ರೆ ರಸೆಲ್ ಅಬ್ಬರಿಸಿದರೆ, ಎಸ್ಆರ್ಹೆಚ್ ಹೆನ್ರಿಕ್ ಕ್ಲಾಸೆನ್ (Heinrich Klaasen) ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.