IPL 2024: ಸಾರ್ವಕಾಲಿಕ ದಾಖಲೆ ಸರಿಗಟ್ಟಿದ ರಾಜಸ್ಥಾನ್ ರಾಯಲ್ಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 31ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನೀಡಿದ ಬೃಹತ್ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಎಸೆತದಲ್ಲಿ ವಿಜಯಲಕ್ಷ್ಮಿಯನ್ನು ಒಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ದಾಖಲೆಯ ಜಯ ಸಾಧಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 17, 2024 | 8:14 AM

ಐಪಿಎಲ್​ನ (IPL 2024) 31ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತನ್ನದೇ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಿದೆ. ಅದು ಸಹ 223 ರನ್​ಗಳನ್ನು ಚೇಸ್ ಮಾಡುವ ಮೂಲಕ ಎಂಬುದು ವಿಶೇಷ.

1 / 6
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ಪರ ಸುನಿಲ್ ನರೈನ್ 56 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 109 ರನ್ ಸಿಡಿಸಿದರು. ಈ ಶತಕದ ನೆರವಿನಿಂದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 223 ರನ್ ಕಲೆಹಾಕಿತು.

2 / 6
224 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಜವಾಬ್ದಾರಿಯುತ ಬ್ಯಾಟಿಂಗ್​ನೊಂದಿಗೆ ಇನಿಂಗ್ಸ್ ಕಟ್ಟಿದ ಬಟ್ಲರ್ 60 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 107 ರನ್ ಬಾರಿಸಿದರು. ಈ ಶತಕದ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವು 20ನೇ ಓವರ್​ನ ಕೊನೆಯ ಎಸೆತದಲ್ಲಿ ಗುರಿ ಮುಟ್ಟಿತು.

3 / 6
ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಬೃಹತ್ ಸ್ಕೋರ್ ಚೇಸ್​ ಅನ್ನು ಚೇಸ್ ಮಾಡಿ ಗೆದ್ದ ವಿಶೇಷ ದಾಖಲೆಯನ್ನು ರಾಜಸ್ಥಾನ್ ರಾಯಲ್ಸ್ ತಂಡ ಮರು ನಿರ್ಮಿಸಿದರು. ಅಂದರೆ ಇದಕ್ಕೂ ಮುನ್ನ ಈ ದಾಖಲೆ ರಾಜಸ್ಥಾನ್ ರಾಯಲ್ಸ್ ತಂಡದ ಹೆಸರಿನಲ್ಲಿಯೇ ಇತ್ತು.

4 / 6
2020 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 224 ರನ್​ಗಳನ್ನು ಚೇಸ್ ಮಾಡುವ ಮೂಲಕ ರಾಜಸ್ಥಾನ್ ರಾಯಲ್ಸ್ ಈ ದಾಖಲೆ ಬರೆದಿದ್ದರು. ಇದೀಗ ಕೆಕೆಆರ್ ನೀಡಿ 224 ರನ್​ಗಳ ಗುರಿಯನ್ನು ಬೆನ್ನತ್ತುವ ಮೂಲಕ ಆರ್​ಆರ್ ಪಡೆ ಹಳೆಯ ದಾಖಲೆಯನ್ನು ಪುನರಾವರ್ತಿಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತೀ ಹೆಚ್ಚು ರನ್​ಗಳನ್ನು ಚೇಸ್ ಮಾಡಿದ ತಂಡ ಎನಿಸಿಕೊಂಡಿದೆ.

5 / 6
ಇನ್ನು ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲಾರ್ಧದಲ್ಲಿ ಒಟ್ಟು 12 ಅಂಕಗಳನ್ನು ಕಲೆಹಾಕಿದೆ. ಈ ಅಂಕಗಳೊಂದಿಗೆ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ ಆರ್​ಆರ್ ತಂಡವು ಅಗ್ರಸ್ಥಾನದಲ್ಲಿದ್ದು, ಮುಂದಿನ 7 ಪಂದ್ಯಗಳಲ್ಲಿ 2 ಜಯ ಸಾಧಿಸಿದರೆ ಪ್ಲೇಆಫ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

6 / 6
Follow us
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್

ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ

ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು

ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ

ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು

ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ