AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹೀಗಾದ್ರೆ RCB ಪ್ಲೇಆಫ್ ಪ್ರವೇಶಿಸುವುದು ಖಚಿತ..!

IPL 2024: ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ 2024ರ ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದುವರೆಗೆ ಗೆದ್ದಿರುವುದು ಒಂದು ಪಂದ್ಯದಲ್ಲಿ ಮಾತ್ರ. ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿದರೆ, ಸಿಎಸ್​ಕೆ, ಎಲ್​ಎಸ್​ಜಿ. ಕೆಕೆಆರ್, ಆರ್​ಆರ್​, ಮುಂಬೈ ಇಂಡಿಯನ್ಸ್, ಎಸ್​ಆರ್​ಹೆಚ್​ ವಿರುದ್ಧ ಸೋಲನುಭವಿಸಿದೆ.

TV9 Web
| Edited By: |

Updated on: Apr 25, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ (IPL 2024) 17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಇದಾಗ್ಯೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶವಿದೆ. ಈ ಅವಕಾಶವು ಉಳಿದ ತಂಡಗಳ ಫಲಿತಾಂಶವನ್ನು ಅವಲಂಭಿಸಿರಲಿದೆ.

1 / 5
ಅಂದರೆ ಪ್ರಸ್ತುತ ಪಾಯಿಂಟ್ಸ್​​ ಟೇಬಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡ ಮೂರನೇ ಸ್ಥಾನದಲ್ಲಿದೆ. ಈ ಟಾಪ್-3 ತಂಡಗಳು ಮುಂದಿನ ಪಂದ್ಯಗಳ ಮೂಲಕ ಕ್ರಮವಾಗಿ 22, 20 ಮತ್ತು 20 ಅಂಕಗಳನ್ನು ಕಲೆಹಾಕಿದರೆ ಇತ್ತ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಹಾದಿ ತೆರೆದುಕೊಳ್ಳಲಿದೆ.

2 / 5
ಅದಕ್ಕೂ ಮುನ್ನ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ವಿರುದ್ಧ ಗೆಲುವು ಸಾಧಿಸಬೇಕು. ಅಂದರೆ ಮುಂದಿನ 6 ಪಂದ್ಯಗಳಲ್ಲೂ ಆರ್​ಸಿಬಿ ಜಯ ಸಾಧಿಸಿ ಒಟ್ಟು 14 ಅಂಕಗಳನ್ನು ಪಡೆಯಬೇಕು. ಅತ್ತ ರಾಜಸ್ಥಾನ್ ರಾಯಲ್ಸ್ 22 ಅಂಕಗಳನ್ನು, ಕೊಲ್ಕತ್ತಾ ನೈಟ್ ರೈಡರ್ಸ್ 20 ಮತ್ತು ಸನ್​ರೈಸರ್ಸ್ ಹೈದರಾಬಾದ್ 20 ಅಂಕಗಳನ್ನು ಪಡೆದರೆ, ಇತರೆ ತಂಡಗಳ ಅಂಕಗಳು 14 ಅಥವಾ ಅದಕ್ಕಿಂತ ಕಡಿಮೆ ಆಗುವ ಸಾಧ್ಯತೆಯಿದೆ. ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂದಿನ 6 ಪಂದ್ಯಗಳಲ್ಲಿ 4 ಮ್ಯಾಚ್​ಗಳಲ್ಲಿ ಸೋಲಲೇಬಕು.

3 / 5
ಹೀಗಾದಲ್ಲಿ ಆರ್​ಸಿಬಿ ತಂಡವು ಒಟ್ಟು 14 ಅಂಕಗಳೊಂದಿಗೆ ನೆಟ್ ರನ್ ರೇಟ್​ ಸಹಾಯದಿಂದ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆಯಲಿದೆ. ಒಂದು ವೇಳೆ ಆರ್​ಸಿಬಿ ತಂಡವು ತನ್ನ ಮುಂದಿನ 6 ಪಂದ್ಯಗಳಲ್ಲಿ ಒಂದು ಸೋಲನುಭವಿಸಿದರೂ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಬಹುತೇಕ ಖಚಿತ.

4 / 5
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಮುಂದಿನ ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯ. ಅದರಲ್ಲೂ ಇಂದು (ಏ.25) ನಡೆಯುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಗೆಲುವು ದಾಖಲಿಸಲೇಬೇಕು. ಹೀಗಾದಲ್ಲಿ ಮಾತ್ರ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

5 / 5
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್