IPL 2024: ಹೀಗಾದ್ರೆ RCB ಪ್ಲೇಆಫ್ ಪ್ರವೇಶಿಸುವುದು ಖಚಿತ..!
TV9 Web | Updated By: ಝಾಹಿರ್ ಯೂಸುಫ್
Updated on:
Apr 25, 2024 | 2:22 PM
IPL 2024: ಸಿಎಸ್ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ 2024ರ ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದುವರೆಗೆ ಗೆದ್ದಿರುವುದು ಒಂದು ಪಂದ್ಯದಲ್ಲಿ ಮಾತ್ರ. ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿದರೆ, ಸಿಎಸ್ಕೆ, ಎಲ್ಎಸ್ಜಿ. ಕೆಕೆಆರ್, ಆರ್ಆರ್, ಮುಂಬೈ ಇಂಡಿಯನ್ಸ್, ಎಸ್ಆರ್ಹೆಚ್ ವಿರುದ್ಧ ಸೋಲನುಭವಿಸಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ (IPL 2024) 17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಇದಾಗ್ಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶವಿದೆ. ಈ ಅವಕಾಶವು ಉಳಿದ ತಂಡಗಳ ಫಲಿತಾಂಶವನ್ನು ಅವಲಂಭಿಸಿರಲಿದೆ.
2 / 5
ಅಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಸನ್ರೈಸರ್ಸ್ ಹೈದರಾಬಾದ್ ತಂಡ ಮೂರನೇ ಸ್ಥಾನದಲ್ಲಿದೆ. ಈ ಟಾಪ್-3 ತಂಡಗಳು ಮುಂದಿನ ಪಂದ್ಯಗಳ ಮೂಲಕ ಕ್ರಮವಾಗಿ 22, 20 ಮತ್ತು 20 ಅಂಕಗಳನ್ನು ಕಲೆಹಾಕಿದರೆ ಇತ್ತ ಆರ್ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಹಾದಿ ತೆರೆದುಕೊಳ್ಳಲಿದೆ.
3 / 5
ಅದಕ್ಕೂ ಮುನ್ನ ಆರ್ಸಿಬಿ ತಂಡವು ಎಸ್ಆರ್ಹೆಚ್ ವಿರುದ್ಧ ಗೆಲುವು ಸಾಧಿಸಬೇಕು. ಅಂದರೆ ಮುಂದಿನ 6 ಪಂದ್ಯಗಳಲ್ಲೂ ಆರ್ಸಿಬಿ ಜಯ ಸಾಧಿಸಿ ಒಟ್ಟು 14 ಅಂಕಗಳನ್ನು ಪಡೆಯಬೇಕು. ಅತ್ತ ರಾಜಸ್ಥಾನ್ ರಾಯಲ್ಸ್ 22 ಅಂಕಗಳನ್ನು, ಕೊಲ್ಕತ್ತಾ ನೈಟ್ ರೈಡರ್ಸ್ 20 ಮತ್ತು ಸನ್ರೈಸರ್ಸ್ ಹೈದರಾಬಾದ್ 20 ಅಂಕಗಳನ್ನು ಪಡೆದರೆ, ಇತರೆ ತಂಡಗಳ ಅಂಕಗಳು 14 ಅಥವಾ ಅದಕ್ಕಿಂತ ಕಡಿಮೆ ಆಗುವ ಸಾಧ್ಯತೆಯಿದೆ. ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂದಿನ 6 ಪಂದ್ಯಗಳಲ್ಲಿ 4 ಮ್ಯಾಚ್ಗಳಲ್ಲಿ ಸೋಲಲೇಬಕು.
4 / 5
ಹೀಗಾದಲ್ಲಿ ಆರ್ಸಿಬಿ ತಂಡವು ಒಟ್ಟು 14 ಅಂಕಗಳೊಂದಿಗೆ ನೆಟ್ ರನ್ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆಯಲಿದೆ. ಒಂದು ವೇಳೆ ಆರ್ಸಿಬಿ ತಂಡವು ತನ್ನ ಮುಂದಿನ 6 ಪಂದ್ಯಗಳಲ್ಲಿ ಒಂದು ಸೋಲನುಭವಿಸಿದರೂ ಪ್ಲೇಆಫ್ ರೇಸ್ನಿಂದ ಹೊರಬೀಳುವುದು ಬಹುತೇಕ ಖಚಿತ.
5 / 5
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಮುಂದಿನ ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯ. ಅದರಲ್ಲೂ ಇಂದು (ಏ.25) ನಡೆಯುವ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಭರ್ಜರಿ ಗೆಲುವು ದಾಖಲಿಸಲೇಬೇಕು. ಹೀಗಾದಲ್ಲಿ ಮಾತ್ರ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.