AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇಂದಿನ ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇದೀಗ 8 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡ 14 ಪಾಯಿಂಟ್ಸ್​ನಲ್ಲೇ ಉಳಿಯಬೇಕು. ಹೀಗಾದ್ರೆ ಆರ್​ಸಿಬಿ ಮುಂದಿನ 3 ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿ ಉತ್ತಮ ನೆಟ್ ರನ್ ರೇಟ್​ನೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

TV9 Web
| Edited By: |

Updated on:May 07, 2024 | 4:59 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 56ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ.

1 / 6
ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡ ಕೂಡ ಪ್ಲೇಆಫ್​ ಲೆಕ್ಕಾಚಾರದಲ್ಲಿದೆ. ಅದರಂತೆ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅನುಕೂಲವಾಗಲಿದೆ ಎಂದು ನೋಡುವುದಾದರೆ....

2 / 6
ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ಆರ್​ಆರ್ ತಂಡ ಗೆಲ್ಲಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲೇ ಉಳಿಯಲಿದೆ. ಈ ಪಂದ್ಯದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಿರುವುದು ಕೇವಲ 2 ಮ್ಯಾಚ್ ಮಾತ್ರ.

3 / 6
ಈ ಎರಡು ಮ್ಯಾಚ್​ಗಳಲ್ಲಿ ಒಂದು ಪಂದ್ಯ ಆರ್​ಸಿಬಿ ವಿರುದ್ಧ ಎಂಬುದು ವಿಶೇಷ. ಅಂದರೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತರೆ ಅಂಕ ಪಟ್ಟಿಯಲ್ಲಿ 10 ಪಾಯಿಂಟ್ಸ್​ನೊಂದಿಗೆ 6ನೇ ಸ್ಥಾನದಲ್ಲ್ಲೇ ಇರಲಿದೆ. ಅತ್ತ ಆರ್​ಸಿಬಿ ಮುಂದಿನ ಪಂದ್ಯವನ್ನು ಗೆದ್ದರೆ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಬಹುದು.

4 / 6
ಹಾಗೆಯೇ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಬಳಿಕ ಆರ್​ಸಿಬಿ ತಂಡದ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್. ಅಂದರೆ ಆರ್​ಸಿಬಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ  12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಲಿದೆ. ಈ ಮೂಲಕ ಪ್ಲೇಆಫ್ ಪ್ರವೇಶಿಸುವ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

5 / 6
ಹೀಗಾಗಿ ದೆಹಲಿಯಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್​ಸಿಬಿ ಅಭಿಮಾನಿಗಳು ಎದುರು ನೋಡಲಿದ್ದಾರೆ. ಈ ಗೆಲುವಿನೊಂದಿಗೆ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ. ಇತ್ತ ಆರ್​ಆರ್ ತಂಡ ಈ ಗೆಲುವು ಆರ್​ಸಿಬಿ ತಂಡ ಪ್ಲೇಆಫ್ ಚಾನ್ಸ್​ ಅನ್ನು ಮತ್ತಷ್ಟು ಹೆಚ್ಚಿಸಲಿದೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಆರ್​ಸಿಬಿ ಪಾಲಿಗೆ ಅನಿವಾರ್ಯ.

6 / 6

Published On - 4:53 pm, Tue, 7 May 24

Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ