IPL 2024: ಇಂದಿನ ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು?
TV9 Web | Updated By: ಝಾಹಿರ್ ಯೂಸುಫ್
Updated on:
May 07, 2024 | 4:59 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇದೀಗ 8 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಆರ್ಸಿಬಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡ 14 ಪಾಯಿಂಟ್ಸ್ನಲ್ಲೇ ಉಳಿಯಬೇಕು. ಹೀಗಾದ್ರೆ ಆರ್ಸಿಬಿ ಮುಂದಿನ 3 ಮ್ಯಾಚ್ಗಳಲ್ಲಿ ಭರ್ಜರಿ ಜಯ ಸಾಧಿಸಿ ಉತ್ತಮ ನೆಟ್ ರನ್ ರೇಟ್ನೊಂದಿಗೆ ಪ್ಲೇಆಫ್ಗೆ ಎಂಟ್ರಿ ಕೊಡಬಹುದು.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 56ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ.
2 / 6
ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್ಸಿಬಿ ತಂಡ ಕೂಡ ಪ್ಲೇಆಫ್ ಲೆಕ್ಕಾಚಾರದಲ್ಲಿದೆ. ಅದರಂತೆ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅನುಕೂಲವಾಗಲಿದೆ ಎಂದು ನೋಡುವುದಾದರೆ....
3 / 6
ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ಆರ್ಆರ್ ತಂಡ ಗೆಲ್ಲಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲೇ ಉಳಿಯಲಿದೆ. ಈ ಪಂದ್ಯದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಿರುವುದು ಕೇವಲ 2 ಮ್ಯಾಚ್ ಮಾತ್ರ.
4 / 6
ಈ ಎರಡು ಮ್ಯಾಚ್ಗಳಲ್ಲಿ ಒಂದು ಪಂದ್ಯ ಆರ್ಸಿಬಿ ವಿರುದ್ಧ ಎಂಬುದು ವಿಶೇಷ. ಅಂದರೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತರೆ ಅಂಕ ಪಟ್ಟಿಯಲ್ಲಿ 10 ಪಾಯಿಂಟ್ಸ್ನೊಂದಿಗೆ 6ನೇ ಸ್ಥಾನದಲ್ಲ್ಲೇ ಇರಲಿದೆ. ಅತ್ತ ಆರ್ಸಿಬಿ ಮುಂದಿನ ಪಂದ್ಯವನ್ನು ಗೆದ್ದರೆ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಬಹುದು.
5 / 6
ಹಾಗೆಯೇ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಬಳಿಕ ಆರ್ಸಿಬಿ ತಂಡದ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್. ಅಂದರೆ ಆರ್ಸಿಬಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಲಿದೆ. ಈ ಮೂಲಕ ಪ್ಲೇಆಫ್ ಪ್ರವೇಶಿಸುವ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.
6 / 6
ಹೀಗಾಗಿ ದೆಹಲಿಯಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್ಸಿಬಿ ಅಭಿಮಾನಿಗಳು ಎದುರು ನೋಡಲಿದ್ದಾರೆ. ಈ ಗೆಲುವಿನೊಂದಿಗೆ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ. ಇತ್ತ ಆರ್ಆರ್ ತಂಡ ಈ ಗೆಲುವು ಆರ್ಸಿಬಿ ತಂಡ ಪ್ಲೇಆಫ್ ಚಾನ್ಸ್ ಅನ್ನು ಮತ್ತಷ್ಟು ಹೆಚ್ಚಿಸಲಿದೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಆರ್ಸಿಬಿ ಪಾಲಿಗೆ ಅನಿವಾರ್ಯ.
Published On - 4:53 pm, Tue, 7 May 24