IPL 2024: CSK ಗೆದ್ದರೆ ಧೋನಿ ಕಾರಣ, ಸೋತರೆ ರುತುರಾಜ್ ಕಾರಣ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಏಪ್ರಿಲ್ 8 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಸಿಎಸ್​ಕೆ ತಂಡ.

TV9 Web
| Updated By: ಝಾಹಿರ್ ಯೂಸುಫ್

Updated on: Apr 06, 2024 | 2:18 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​ 17 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಡಿರುವ 4 ಪಂದ್ಯಗಳಲ್ಲಿ 2 ರಲ್ಲಿ ಸೋತಿದೆ. ಇನ್ನೆರಡು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಅಂದರೆ ಇಲ್ಲಿ ಸಿಎಸ್​ಕೆ ಗೆದ್ದಿರುವುದು ತವರಿನಲ್ಲಿ ನಡೆದ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಗಳಲ್ಲಿ ಮಾತ್ರ.

1 / 6
ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಸಿಎಸ್​ಕೆ ಅಭಿಮಾನಿಗಳು ರುತುರಾಜ್ ಗಾಯಕ್ವಾಡ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ. ರುತುರಾಜ್ ಕಳಪೆ ನಾಯಕತ್ವದಿಂದ ಸಿಎಸ್​ಕೆ ಸೋಲುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ದೂರುತ್ತಿದ್ದಾರೆ.

2 / 6
ಸಿಎಸ್​ಕೆ ಅಭಿಮಾನಿಗಳ ಈ ವಿತಂಡ ವಾದಗಳ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಹರ್ಭಜನ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ ಪ್ರತಿಕ್ರಿಯಿಸಿದ್ದಾರೆ. ಇಬ್ಬರೂ ಕೂಡ ಸಿಎಸ್​ಕೆ ಅಭಿಮಾನಿಗಳ ಮನಸ್ಥಿತಿಯ ಬಗ್ಗೆ ವ್ಯಂಗ್ಯವಾಡಿದ್ದಾರೆ. ಅದು ಕೂಡ ಧೋನಿಯನ್ನು ಮುಂದಿಟ್ಟುಕೊಂಡು ಎಂಬುದು ವಿಶೇಷ.

3 / 6
ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲೆರಡು ಮ್ಯಾಚ್​ಗಳನ್ನು ಗೆದ್ದಾಗ ಸಿಎಸ್​ಕೆ ಅಭಿಮಾನಿಗಳು ಧೋನಿಯ ಗರಡಿ ಹುಡುಗ, ಧೋನಿ ಹಿಂದೆ ನಿಂತು ರುತುರಾಜ್ ಅವರನ್ನು ಮುನ್ನಡೆಸುತ್ತಿದ್ದಾರೆ ಎಂದೆಲ್ಲಾ ಹಾಡಿ ಹೊಗಳಿದ್ದರು. ಅಂದರೆ ಸಿಎಸ್​ಕೆ ತಂಡ ಗೆದ್ದಾಗ ಧೋನಿ ಯುವ ನಾಯಕನನ್ನು ಸರಿಯಾದ ದಿಕ್ಕಿನಲ್ಲಿ ನಡೆಸುತ್ತಿದ್ದಾರೆ ಎಂದು ಹಾಡಿ ಹೊಗಳಲಾಗಿತ್ತು.

4 / 6
ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋತಾಗ ರುತುರಾಜ್ ಗಾಯಕ್ವಾಡ್ ನಾಯಕತ್ವವನ್ನು ದೂರುತ್ತಿದ್ದಾರೆ. ಅಂದರೆ ಸಿಎಸ್​ಕೆ ಗೆದ್ದರೆ ಶ್ರೇಯಸ್ಸು ಧೋನಿಗೆ ಸಲ್ಲುತ್ತದೆ. ಒಂದು ವೇಳೆ ಸೋತರೆ ಅದಕ್ಕೆ ಕಾರಣ ರುತುರಾಜ್ ಗಾಯಕ್ವಾಡ್ ನಾಯಕತ್ವ... ಎಂದು ಸಿಎಸ್​ಕೆ ಅಭಿಮಾನಿಗಳ ದೂರಿನ ಬಗ್ಗೆ ಮೊಹಮ್ಮದ್ ಕೈಫ್ ಮತ್ತು ಹರ್ಭಜನ್ ಸಿಂಗ್ ವ್ಯಂಗ್ಯವಾಡಿದ್ದಾರೆ.

5 / 6
ಸದ್ಯ 4 ಪಂದ್ಯಗಳನ್ನಾಡಿರುವ ಸಿಎಸ್​ಕೆ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ತನ್ನ ಮುಂದಿನ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಏಪ್ರಿಲ್ 8 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

6 / 6
Follow us
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ