IPL 2024: ಐಪಿಎಲ್ಗೆ ಮೂವರು ಬದಲಿ ಆಟಗಾರರು ಎಂಟ್ರಿ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. 10 ತಂಡಗಳ ನಡುವಣ ಈ ಕ್ರಿಕೆಟ್ ಕದನದ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿರುವುದು ವಿಶೇಷ.
Updated on: Mar 11, 2024 | 12:10 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ ವಾರಗಳು ಮಾತ್ರ ಉಳಿದಿವೆ. ಇದಕ್ಕೂ ಮುನ್ನವೇ ನಾಲ್ವರು ಆಟಗಾರರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಈ ನಾಲ್ವರ ಸ್ಥಾನದಲ್ಲಿ ಮೂವರು ಬದಲಿ ಆಟಗಾರರು ಐಪಿಎಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಆ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

ಶಮರ್ ಜೋಸೆಫ್: ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕೇವಲ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಆದರೆ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಗುಳಿದಿರುವ ಇಂಗ್ಲೆಂಡ್ ವೇಗಿ ಮಾರ್ಕ್ ವುಡ್ ಅವರ ಬದಲಿ ಆಟಗಾರನಾಗಿ ಶಮರ್ ಜೋಸೆಫ್ LSG ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ದುಷ್ಮಂತ ಚಮೀರಾ: ಈ ಬಾರಿಯ ಐಪಿಎಲ್ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಶ್ರೀಲಂಕಾ ವೇಗಿ ದುಷ್ಮಂತ ಚಮೀರಾ ಬಿಕರಿಯಾಗದೇ ಉಳಿದಿದ್ದರು. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಗುಳಿದಿರುವ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ಬದಲಿ ಆಟಗಾರನಾಗಿ ದುಷ್ಮಂತ ಚಮೀರಾ KKR ತಂಡಕ್ಕೆ ಆಯ್ಕೆಯಾಗಿದ್ದಾರೆ.

ಫಿಲ್ ಸಾಲ್ಟ್: ಐಪಿಎಲ್ 2024 ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದ ಇಂಗ್ಲೆಂಡ್ ಬ್ಯಾಟರ್ ಫಿಲ್ ಸಾಲ್ಟ್ ಅವರನ್ನು ಬಿಡ್ಡಿಂಗ್ನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ಬ್ಯಾಟರ್ ಜೇಸನ್ ರಾಯ್ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಅವರ ಬದಲಿ ಆಟಗಾರನಾಗಿ ಫಿಲ್ ಸಾಲ್ಟ್ KKR ಎಂಟ್ರಿ ಕೊಟ್ಟಿದ್ದಾರೆ.

ಗುಜರಾತ್ ಟೈಟಾನ್ಸ್ ತಂಡದ ವೇಗಿ ಮೊಹಮ್ಮದ್ ಶಮಿ ಈ ಬಾರಿಯ ಐಪಿಎಲ್ನಲ್ಲಿ ಕಣಕ್ಕಿಳಿಯುವುದಿಲ್ಲ. ಹಿಮ್ಮಡಿ ಪಾದದ ನೋವಿನ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಶಮಿ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಗುಜರಾತ್ ಟೈಟಾನ್ಸ್ ಇನ್ನೂ ಕೂಡ ಬದಲಿ ಆಟಗಾರನನ್ನು ಹೆಸರಿಸಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ನ 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಹೈವೋಲ್ಟೇಜ್ ಪಂದ್ಯದೊಂದಿಗೆ ಐಪಿಎಲ್ 2024 ಕ್ಕೆ ಚಾಲನೆ ಸಿಗಲಿದೆ.
