AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಲುಕ್ ಬದಲಿಸಿದ ವಿರಾಟ್ ಕೊಹ್ಲಿ: ಬದಲಾಗುತ್ತಾ RCB ಲಕ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಕಣಕ್ಕಿಳಿಯಲಿದೆ. ಸಾಂಪ್ರದಾಯಿಕ ಎದುರಾಳಿಗಳ ನಡುವಣ ಈ ಹೈವೋಲ್ಟೇಜ್ ಪಂದ್ಯದೊಂದಿಗೆ IPL 2024 ಶುರುವಾಗಲಿದೆ.

TV9 Web
| Edited By: |

Updated on: Mar 19, 2024 | 12:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆರ್​ಸಿಬಿ ತಂಡದ ಅನ್​ಬಾಕ್ಸ್​ ಕಾರ್ಯಕ್ರಮಕ್ಕೂ ಮುಂಚಿತವಾಗಿ ಕೊಹ್ಲಿ ತಮ್ಮ ಹೇರ್​ ಸ್ಟೈಲ್ ಬದಲಿಸಿಕೊಂಡಿದ್ದು, ಈ ಮೂಲಕ ಹೊಸ ಅವತಾರದಲ್ಲಿ ಮಿಂಚಿದ್ದಾರೆ.

1 / 6
ಇದೀಗ ಕಿಂಗ್ ಕೊಹ್ಲಿಯ ನ್ಯೂ ಹೇರ್​ಸ್ಟೈಲ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ವಿರಾಟ್​ನ ಹೊಸ ಲುಕ್​ನೊಂದಿಗೆ ಆರ್​ಸಿಬಿ ತಂಡದ ಲಕ್ ಕೂಡ ಬದಲಾಗಲಿದೆಯಾ ಎಂಬ ಚರ್ಚೆಗಳು ಸಹ ಶುರುವಾಗಿದೆ.

2 / 6
ಏಕೆಂದರೆ ಕಿಂಗ್ ಕೊಹ್ಲಿ ಕಳೆದ 16 ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 237 ಪಂದ್ಯಗಳನ್ನಾಡಿದ್ದ್ದು, 7263 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಕಿಂಗ್ ಕೊಹ್ಲಿ ಪಾಲಿಗೆ ಐಪಿಎಲ್ ಟ್ರೋಫಿ ಮರೀಚಿಕೆಯಾಗಿಯೇ ಉಳಿದಿದೆ.

3 / 6
ಆರ್​ಸಿಬಿ ತಂಡವು 2009, 2011 ರಲ್ಲಿ ಫೈನಲ್ ಪ್ರವೇಶಿಸಿದರೂ ಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ರಾಯಲ್ ಪಡೆ ಫೈನಲ್ ಆಡಿದರೂ, ಕೇವಲ 8 ರನ್​ಗಳಿಂದ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

4 / 6
ಇದಾದ ಬಳಿಕ ಆರ್​ಸಿಬಿ ತಂಡವು ಒಮ್ಮೆಯೂ ಫೈನಲ್​ಗೆ ಪ್ರವೇಶಿಲ್ಲ. ಹೀಗಾಗಿಯೇ ಕೊಹ್ಲಿಯ ನ್ಯೂ ಲುಕ್​ನೊಂದಿಗೆ ಆರ್​ಸಿಬಿ ತಂಡ ಲಕ್ ಕೂಡ ಬದಲಾಗಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

5 / 6
ಅಂದಹಾಗೆ ವಿರಾಟ್ ಕೊಹ್ಲಿಯ ಲುಕ್​ಗೆ ಹೊಸ ಟಚ್ ನೀಡಿದ್ದು ಮತ್ಯಾರೂ ಅಲ್ಲ. ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್. ಈ ಹಿಂದೆ ಧೋನಿ, ಚಹಲ್ ಸೇರಿದಂತೆ ಟೀಮ್ ಇಂಡಿಯಾದ ಹಲವು ಆಟಗಾರರ ಲುಕ್ ಬದಲಿಸಿದ್ದ ಆಲಿಮ್ ಇದೀಗ ವಿರಾಟ್ ಕೊಹ್ಲಿಯನ್ನು ಸಖತ್ ಸ್ಟೈಲಿಸ್ಟ್ ಆಗಿ ತೋರಿಸಿದ್ದಾರೆ.

6 / 6
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್

ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ