
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 38 ಪಂದ್ಯಗಳ ಮುಕ್ತಾಯದ ವೇಳೆಗೆ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (Virat Kohli) ಅಗ್ರಸ್ಥಾನದಲ್ಲಿದ್ದಾರೆ. ನಂತರದ ಸ್ಥಾನಗಳಲ್ಲಿ ಟ್ರಾವಿಸ್ ಹೆಡ್ ಹಾಗೂ ರಿಯಾನ್ ಪರಾಗ್ ಇದ್ದು, ಈ ಇಬ್ಬರು ಆಟಗಾರರು ಕೂಡ ಕಿಂಗ್ ಕೊಹ್ಲಿಗೆ ಕಠಿಣ ಪೈಪೋಟಿ ಒಡ್ಡುವ ನಿರೀಕ್ಷೆಯಿದೆ. ಅದರಂತೆ ಆರೆಂಜ್-ಪರ್ಪಲ್ ಕ್ಯಾಪ್ ರೇಸ್ನಲ್ಲಿರುವ ಟಾಪ್-3 ಆಟಗಾರರ ಪಟ್ಟಿ ಇಲ್ಲಿದೆ...

1- ವಿರಾಟ್ ಕೊಹ್ಲಿ: ಈ ಬಾರಿಯ ಐಪಿಎಲ್ನಲ್ಲಿ ಇದುವರೆಗೆ 8 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 252 ಎಸೆತಗಳನ್ನು ಎದುರಿಸಿದ್ದು, ಈ ಮೂಲಕ 379 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

2- ಟ್ರಾವಿಸ್ ಹೆಡ್: ಸನ್ರೈಸರ್ಸ್ ಹೈದರಾಬಾದ್ ಪರ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಎಡಗೈ ದಾಂಡಿಗ ಟ್ರಾವಿಸ್ ಹೆಡ್ ಆರೆಂಜ್ ಕ್ಯಾಪ್ ರೇಸ್ನಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಇದುವರೆಗೆ 6 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಹೆಡ್ 150 ಎಸೆತಗಳಲ್ಲಿ 324 ರನ್ ಬಾರಿಸಿದ್ದಾರೆ. ಈ ವೇಳೆ 1 ಭರ್ಜರಿ ಶತಕ ಹಾಗೂ 2 ಹಾಫ್ ಸೆಂಚುರಿಗಳನ್ನು ಸಿಡಿಸಿದ್ದಾರೆ.

3- ರಿಯಾನ್ ಪರಾಗ್: ಆರೆಂಜ್ ಕ್ಯಾಪ್ ರೇಸ್ನಲ್ಲಿ ರಿಯಾನ್ ಪರಾಗ್ ಮೂರನೇ ಸ್ಥಾನದಲ್ಲಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರ 7 ಇನಿಂಗ್ಸ್ ಆಡಿರುವ ಪರಾಗ್ 197 ಎಸೆತಗಳಲ್ಲಿ ಒಟ್ಟು 318 ರನ್ ಕಲೆಹಾಕಿದ್ದಾರೆ. ಈ ವೇಳೆ 3 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ.

1- ಜಸ್ಪ್ರೀತ್ ಬುಮ್ರಾ: ಪರ್ಪಲ್ ಕ್ಯಾಪ್ ರೇಸ್ನಲ್ಲಿ ಅಗ್ರಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ವೇಗಿ ಜಸ್ಪ್ರೀತ್ ಬುಮ್ರಾ. 8 ಪಂದ್ಯಗಳಲ್ಲಿ 32 ಓವರ್ಗಳನ್ನು ಎಸೆದಿರುವ ಜಸ್ಪ್ರೀತ್ ಬುಮ್ರಾ 204 ರನ್ ನೀಡಿ 13 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.

2- ಯುಜ್ವೇಂದ್ರ ಚಹಲ್: ಈ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 8 ಪಂದ್ಯಗಳಲ್ಲಿ ಒಟ್ಟು 30 ಓವರ್ಗಳನ್ನು ಎಸೆದಿರುವ ಚಹಲ್ 265 ರನ್ ನೀಡಿ 13 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

3- ಹರ್ಷಲ್ ಪಟೇಲ್: ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯುತ್ತಿರುವ ವೇಗಿ ಹರ್ಷಲ್ ಪಟೇಲ್ 8 ಪಂದ್ಯಗಳಲ್ಲಿ 29 ಓವರ್ಗಳನ್ನು ಎಸೆದಿದ್ದಾರೆ. ಈ ವೇಳೆ 278 ರನ್ ನೀಡಿ ಒಟ್ಟು 13 ವಿಕೆಟ್ಗಳನ್ನು ಕಬಳಿಸಿ, ಪರ್ಪಲ್ ಕ್ಯಾಪ್ ರೇಸ್ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.