- Kannada News Photo gallery Cricket photos IPL Trophy is not winning by only beating CSK: Ambati Rayudu
CSK ಯನ್ನು ಸೋಲಿಸಿದ ಮಾತ್ರಕ್ಕೆ RCBಗೆ ಟ್ರೋಫಿ ಸಿಗಲ್ಲ: ರಾಯುಡು ವ್ಯಂಗ್ಯ
IPL 2024 RCB vs RR: ಐಪಿಎಲ್ ಸೀಸನ್ 17ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ಸಿಬಿ ಸೋಲನುಭವಿಸಿದೆ. ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 172 ರನ್ ಕಲೆಹಾಕಿತು. ಈ ಗುರಿಯನ್ನು 19 ಓವರ್ಗಳಲ್ಲಿ ಚೇಸ್ ಮಾಡಿ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Updated on: May 23, 2024 | 8:51 AM

IPL 2024: ಐಪಿಎಲ್ನ 17ನೇ ಆವೃತ್ತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಗ್ಗರಿಸಿದೆ. ಕಳೆದ 16 ಸೀಸನ್ಗಳಿಂದ ಪ್ರಶಸ್ತಿ ಕನಸು ಹೊಂದಿದ್ದ ಆರ್ಸಿಬಿ ಈ ಬಾರಿ ಕೂಡ ನಿರ್ಣಾಯಕ ಪಂದ್ಯದಲ್ಲಿ ಸೋಲನುಭವಿಸಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಸೋಲಿನೊಂದಿಗೆ ಆರ್ಸಿಬಿ ತಂಡದ ಐಪಿಎಲ್ ಅಭಿಯಾನವನ್ನು ಅಂತ್ಯವಾಗಿದೆ.

ಈ ಸೋಲಿನ ಬೆನ್ನಲ್ಲೇ ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ನೀಡಿದ ಹೇಳಿಕೆಗಳು ವೈರಲ್ ಆಗುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದ ಮಾತ್ರಕ್ಕೆ ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವಿಲ್ಲ ಎಂದು ರಾಯುಡು ವ್ಯಂಗ್ಯವಾಡಿದ್ದಾರೆ.

ಯಾರೂ ಸಹ ಐಪಿಎಲ್ ಟ್ರೋಫಿಯನ್ನು ಕೇವಲ ಸಂಭ್ರಮಾಚರಣೆ ಮತ್ತು ಆಕ್ರಮಣಕಾರಿ ವರ್ತನೆಯಿಂದ ಗೆದ್ದಿಲ್ಲ. ಅಥವಾ ಸಿಎಸ್ಕೆ ತಂಡವನ್ನು ಸೋಲಿಸಿದ್ದರಿಂದ ಯಾರೂ ಸಹ ಐಪಿಎಲ್ ಟ್ರೋಫಿ ಗೆದ್ದಿಲ್ಲ. ನೀವು ಟ್ರೋಫಿ ಗೆಲ್ಲಬೇಕಿದ್ದರೆ ಪ್ಲೇಆಫ್ನಲ್ಲಿ ಚೆನ್ನಾಗಿ ಆಡಬೇಕಾಗುತ್ತದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಇಲ್ಲಿ ರಾಯುಡು, ಸಂಭ್ರಮಾಚರಣೆ ಮತ್ತು ಆಕ್ರಮಣಕಾರಿ ವರ್ತನೆಯ ವಿಷಯಗಳನ್ನು ಪ್ರಸ್ತಾಪಿಸಿದ್ದು, ಸಿಎಸ್ಕೆ ವಿರುದ್ಧದ ಆರ್ಸಿಬಿ ತಂಡ ಗೆಲುವಿನ ಸಂಭ್ರಮವನ್ನು. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಸಿಎಸ್ಕೆ ತಂಡವನ್ನು ಬಗ್ಗು ಬಡಿದು ಆರ್ಸಿಬಿ ಭರ್ಜರಿಯಾಗಿ ಸಂಭ್ರಮಿಸಿದ್ದರು. ಹಾಗೆಯೇ ವಿರಾಟ್ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮವನ್ನು ತಮ್ಮ ಹೇಳಿಕೆಯಲ್ಲಿ ಪರೋಕ್ಷವಾಗಿ ರಾಯುಡು ಪ್ರಸ್ತಾಪಿಸಿದ್ದಾರೆ.

ಈ ಮೂಲಕ ಕೇವಲ ಸಂಭ್ರಮಾಚರಣೆ ಅಥವಾ ಆಕ್ರಮಣಕಾರಿಯಾಗಿ ವರ್ತನೆಯಿಂದ ಆರ್ಸಿಬಿ ಮತ್ತು ವಿರಾಟ್ ಕೊಹ್ಲಿ ಟ್ರೋಫಿ ಗೆಲ್ಲಲ್ಲ ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೂ ಮುನ್ನ ಆರ್ಸಿಬಿ ತಂಡ ಈ ಸಲ ಟ್ರೋಫಿ ಎತ್ತಿ ಹಿಡಿಯಲ್ಲ ಎಂದು ರಾಯುಡು ಭವಿಷ್ಯ ನುಡಿದಿದ್ದರು. ಅದರಂತೆ ಇದೀಗ ಸೋಲಿನೊಂದಿಗೆ ಆರ್ಸಿಬಿ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಿದೆ.




