AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗಾಯವನ್ನು ಮರೆಮಾಚುತ್ತಿದ್ದಾರಾ ಹಾರ್ದಿಕ್ ಪಾಂಡ್ಯ?

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 17ನೇ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ಇದುವರೆಗೆ 48 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 89 ರನ್​ಗಳನ್ನು ನೀಡಿರುವ ಅವರು ಪಡೆದಿರುವುದು ಕೇವಲ 1 ವಿಕೆಟ್ ಮಾತ್ರ. ಅಂದರೆ ಪ್ರತಿ ಓವರ್​ಗೆ 11.13 ರ ಸರಾಸರಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಮುಂಬೈ ಇಂಡಿಯನ್ಸ್ ಪಾಲಿಗೆ ದುಬಾರಿಯಾಗಿ ಪರಿಣಮಿಸಿದ್ದಾರೆ.

TV9 Web
| Edited By: |

Updated on: Apr 13, 2024 | 1:29 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17ರ ಮೂಲಕ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿರುವ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಮುಂಬೈ ಇಂಡಿಯನ್ಸ್ ತಂಡದ ಕಪ್ತಾನನ ಹೊಸ ನಡೆ.

1 / 6
ಹೌದು, ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೊದಲೆರಡು ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಇನಿಂಗ್ಸ್​ನ ಮೊದಲ ಓವರ್ ಎಸೆದಿದ್ದರು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಗಳಲ್ಲಿ ಪಾಂಡ್ಯ ಒಂದೇ ಒಂದು ಓವರ್  ಬೌಲಿಂಗ್ ಮಾಡಿರಲಿಲ್ಲ.

2 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ಎಸೆದಿದ್ದು ಕೇವಲ 1 ಓವರ್​ ಮಾತ್ರ. ಅಂದರೆ ಮೊದಲ ಎರಡು ಪಂದ್ಯಗಳಲ್ಲಿ ಪೂರ್ಣ ಪ್ರಮಾಣದ ಆಲ್​ರೌಂಡರ್ ಆಗಿ ಕಾಣಿಸಿಕೊಂಡಿದ್ದ ಪಾಂಡ್ಯ ಆ ಬಳಿಕ ಬೌಲಿಂಗ್ ಮಾಡದಿರುವುದು ಹೊಸ ಅನುಮಾನಕ್ಕೆ ಕಾರಣವಾಗಿದೆ.

3 / 6
ಅದರಲ್ಲೂ ಭುಜದ ನೋವಿನ ಕಾರಣ ಹಾರ್ದಿಕ್ ಪಾಂಡ್ಯ ಬೌಲಿಂಗ್​ ಮಾಡಲು ಹಿಂದೇಟು ಹಾಕುತ್ತಿದ್ದಾರಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ. ಏಕೆಂದರೆ ಈ ಹಿಂದೆ ಕೂಡ ಪಾಂಡ್ಯ ತನ್ನ ತೋಳು ನೋವಿನ ಸಮಸ್ಯೆಯನ್ನು ಮರೆಮಾಚಿ ಟಿ20 ವಿಶ್ವಕಪ್ 2021ರ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಬಳಿಕ ಅವರು ಸಂಪೂರ್ಣ 4 ಓವರ್​ಗಳನ್ನು ಎಸೆಯಲು ಹಿಂದೇಟು ಹಾಕಿದ್ದರು.

4 / 6
ಇದೀಗ ಮತ್ತೆ ಬೌಲಿಂಗ್ ಮಾಡಲು ಹಿಂದೇಟು ಹಾಕುತ್ತಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಏಕೆಂದರೆ ಮುಂಬರುವ ಟಿ20 ವಿಶ್ವಕಪ್​​​ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಹಾರ್ದಿಕ್ ಪಾಂಡ್ಯ ಆಲ್​ರೌಂಡರ್​ ಆಗಿ ತಮ್ಮ ಕ್ಷಮತೆಯನ್ನು ಸಾಬೀತುಪಡಿಸಬೇಕಿದೆ. ಆದರೆ ಇತ್ತ 5 ಪಂದ್ಯಗಳಲ್ಲಿ ಪಾಂಡ್ಯ ಎಸೆದಿರುವುದು ಕೇವಲ 8 ಓವರ್​ಗಳು ಮಾತ್ರ.

5 / 6
ಇದೀಗ ಅವರು ಫಿಟ್​​ನೆಸ್ ಸಮಸ್ಯೆಯನ್ನು ಮರೆಮಾಚುವ ಸಲುವಾಗಿಯೇ ಬೌಲಿಂಗ್​ನಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ಅಪವಾದಗಳು ಕೇಳಿ ಬರುತ್ತಿದೆ. ಈ ಅಪವಾದವನ್ನು ಹಾರ್ದಿಕ್ ಪಾಂಡ್ಯ ಮುಂದಿನ ಪಂದ್ಯಗಳಲ್ಲಿ ಬೌಲಿಂಗ್ ಮಾಡುವ ಮೂಲಕ ತೊಡೆದು ಹಾಕಲಿದ್ದಾರಾ ಕಾದು ನೋಡಬೇಕಿದೆ.

6 / 6
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?

ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ