AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಜೇಕ್ ಫ್ರೇಸರ್ ಜಬರ್​ದಸ್ತ್ ದಾಖಲೆ

IPL 2024: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 56ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 221 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ 201 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ರನ್​ಗಳ ಜಯ ಸಾಧಿಸಿತು.

TV9 Web
| Edited By: |

Updated on: May 08, 2024 | 8:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 56ನೇ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಜೇಕ್ ಫ್ರೇಸರ್ ಮೆಕ್​ಗುರ್ಕ್​ (Jake Fraser-McGurk) ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಜೇಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 5
ಮೊದಲ ಓವರ್​ನಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿದ ಜೇಕ್ ಫ್ರೇಸರ್ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಹಾಫ್ ಸೆಂಚುರಿಯೊಂದಿಗೆ ಐಪಿಎಲ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಅತ್ಯಧಿಕ ಬಾರಿ ಅರ್ಧಶತಕಗಳನ್ನು ಸಿಡಿಸಿದ ವಿಶೇಷ ದಾಖಲೆಯೊಂದು ಜೇಕ್ ಫ್ರೇಸರ್ ಪಾಲಾಯಿತು.

2 / 5
ಅಂದರೆ ಐಪಿಎಲ್ ಇತಿಹಾಸದಲ್ಲಿ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ ಅತೀ ಹೆಚ್ಚು ಬಾರಿ ಅರ್ಧಶತಕ ಸಿಡಿಸಿದ ದಾಖಲೆ ಇದೀಗ ಜೇಕ್​ ಫ್ರೇಸರ್ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಯಶಸ್ವಿ ಜೈಸ್ವಾಲ್, ನಿಕೋಲಸ್ ಪೂರನ್, ಇಶಾನ್ ಕಿಶನ್, ಕೀರನ್ ಪೊಲಾರ್ಡ್, ಟ್ರಾವಿಸ್ ಹೆಡ್ ಹಾಗೂ ಕೆಎಲ್ ರಾಹುಲ್ ಹೆಸರಿನಲ್ಲಿತ್ತು. ಇವರೆಲ್ಲರೂ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ 2 ಬಾರಿ ಅರ್ಧಶತಕ ಸಿಡಿಸಿದ್ದರು.

3 / 5
ಆದರೆ ಜೇಕ್ ಫ್ರೇಸರ್ ಈ ಬಾರಿಯ ಐಪಿಎಲ್​ನಲ್ಲೇ ಮೂರು ಬಾರಿ ಸ್ಪೋಟಕ ಅರ್ಧಶತಕ ಸಿಡಿಸಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 15 ಎಸೆತಗಳಲ್ಲಿ ಹಾಫ್ ಸೆಂಚುರಿ ಬಾರಿಸಿ ದಾಖಲೆ ಬರೆದಿದ್ದ ಜೇಕ್, ಆ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲೂ 15 ಎಸೆತಗಳಲ್ಲೇ ಅರ್ಧಶತಕ ಪೂರೈಸಿದ್ದರು.

4 / 5
ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಬಾರಿ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್

‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ

ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್

ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು

ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ

ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ

ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ

ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ

ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!

ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್