IPL 2024: SRH ಬಳಗದಿಂದ ಡೇಲ್ ಸ್ಟೇನ್ ಔಟ್: ಜೇಮ್ಸ್ ಎಂಟ್ರಿ

| Updated By: ಝಾಹಿರ್ ಯೂಸುಫ್

Updated on: Mar 03, 2024 | 8:37 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಈ ಬಾರಿಯ IPL​ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಇನ್ನು SRH ತಂಡ ಮಾರ್ಚ್ 23 ರಂದು KKR ವಿರುದ್ಧ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಲಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) 17ನೇ ಆವೃತ್ತಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಎಲ್ಲಾ ಫ್ರಾಂಚೈಸಿ ಸಿದ್ಧತೆಗಳನ್ನು ಶುರು ಮಾಡಿಕೊಂಡಿದೆ. ಅತ್ತ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ತನ್ನ ಸಿಬ್ಬಂದಿ ವರ್ಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಅದರಂತೆ ಮುಂಬರುವ ಐಪಿಎಲ್​ನಿಂದ SRH ತಂಡದ ಬೌಲಿಂಗ್ ಕೋಚ್ ಡೇಲ್​ ಸ್ಟೇನ್ ಅವರನ್ನು ಕೈ ಬಿಡಲಾಗಿದೆ.

2 / 5
ಕಳೆದ ಕೆಲ ವರ್ಷಗಳಿಂದ ಸೌತ್ ಆಫ್ರಿಕಾ ತಂಡದ ಮಾಜಿ ವೇಗಿ ಡೇಲ್ ಸ್ಟೇನ್ ಸನ್​ರೈಸರ್ಸ್​ ಹೈದರಾಬಾದ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಈ ಬಾರಿಯ ಐಪಿಎಲ್​ಗೂ ಮುನ್ನ ಸ್ಟೇನ್ ಅವರನ್ನು ಬೌಲಿಂಗ್ ಕೋಚ್ ಸ್ಥಾನದಿಂದ ಕೆಳಗಿಳಿಸಲಾಗಿದೆ.

3 / 5
ಡೇಲ್ ಸ್ಟೇನ್ ಸ್ಥಾನದಲ್ಲಿ ನ್ಯೂಝಿಲೆಂಡ್ ತಂಡದ ಮಾಜಿ ಆಲ್​ರೌಂಡರ್ ಜೇಮ್ಸ್ ಫ್ರಾಂಕ್ಲಿನ್ ಅವರನ್ನು ನೂತನ ಬೌಲಿಂಗ್ ಕೋಚ್ ಆಗಿ SRH ಫ್ರಾಂಚೈಸಿ ನೇಮಿಸಿದೆ. ನ್ಯೂಝಿಲೆಂಡ್ ಪರ 38 ಟಿ20 ಪಂದ್ಯಗಳನ್ನಾಡಿರುವ ಫ್ರಾಂಕ್ಲಿನ್ 20 ವಿಕೆಟ್​ ಹಾಗೂ 463 ರನ್​ ಕಲೆಹಾಕಿದ್ದರು.

4 / 5
ಹಾಗೆಯೇ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ 20 ಪಂದ್ಯಗಳನ್ನಾಡಿದ್ದರು. ಈ ವೇಳೆ 16 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಫ್ರಾಂಕ್ಲಿನ್ 327 ರನ್ ಹಾಗೂ 9 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. 2011 ರ ಬಳಿಕ ಐಪಿಎಲ್​ನಿಂದ ದೂರ ಉಳಿದಿದ್ದ ಜೇಮ್ಸ್ ಫ್ರಾಂಕ್ಲಿನ್ ಇದೀಗ ಬೌಲಿಂಗ್ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

5 / 5
ಸನ್​ರೈಸರ್ಸ್​ ಹೈದರಾಬಾದ್ ತಂಡ: ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಮಾರ್ಕೊ ಯಾನ್ಸೆನ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಸನ್ವಿರ್ ಸಿಂಗ್, ಹೆನ್ರಿಕ್ ಕ್ಲಾಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಅಗರ್ವಾಲ್, ಟಿ. ನಟರಾಜನ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ಮಾರ್ಕಾಂಡೆ, ಉಪೇಂದ್ರ ಸಿಂಗ್ ಯಾದವ್, ಉಮ್ರಾನ್ ಮಲಿಕ್, ನಿತೀಶ್ ಕುಮಾರ್ ರೆಡ್ಡಿ, ಫಜಲ್ಹಕ್ ಫಾರೂಕಿ, ಶಹಬಾಝ್ ಅಹ್ಮದ್, ಟ್ರಾವಿಸ್ ಹೆಡ್, ವನಿಂದು ಹಸರಂಗ, ಪ್ಯಾಟ್ ಕಮ್ಮಿನ್ಸ್, ಜಯದೇವ್ ಉನಾದ್ಕತ್, ಆಕಾಶ್ ಸಿಂಗ್, ಜಾತವೇಧ್ ಸುಬ್ರಮಣ್ಯನ್.