IPL 2024: ಬೂಮ್ ಬೂಮ್… ಭರ್ಜರಿ ದಾಖಲೆ ಬರೆದ ಬುಮ್ರಾ

| Updated By: ಝಾಹಿರ್ ಯೂಸುಫ್

Updated on: Mar 25, 2024 | 6:28 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​) ಐದನೇ ಪಂದ್ಯದಲ್ಲಿ ಮಿಂಚಿನ ದಾಳಿ ಸಂಘಟಿಸುವ ಮೂಲಕ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಮುಂಬೈ ಇಂಡಿಯನ್ಸ್ ಬೌಲಿಂಗ್ ಕೋಚ್ ಲಸಿತ್ ಮಾಲಿಂಗ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ಭರ್ಜರಿ ದಾಖಲೆ ಬರೆದಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಬುಮ್ರಾ 4 ಓವರ್​ಗಳಲ್ಲಿ ಕೇವಲ 14 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು.

2 / 5
ಈ ಮೂರು ವಿಕೆಟ್​ಗಳೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 3+ ವಿಕೆಟ್​ ಪಡೆದ ಬೌಲರ್ ಎಂಬ ದಾಖಲೆಯನ್ನು ಬುಮ್ರಾ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಅವರ ಹೆಸರಿನಲ್ಲಿತ್ತು.

3 / 5
ಮುಂಬೈ ಇಂಡಿಯನ್ಸ್ ಪರ 122 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಲಸಿತ್ ಮಾಲಿಂಗ ಒಟ್ಟು 19 ಬಾರಿ 3+ ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಬುಮ್ರಾ ಯಶಸ್ವಿಯಾಗಿದ್ದಾರೆ.

4 / 5
ಐಪಿಎಲ್​ನಲ್ಲಿ ಇದುವರೆಗೆ 121 ಇನಿಂಗ್ಸ್​ ಆಡಿರುವ ಬೂಮ್ ಬೂಮ್ ಬುಮ್ರಾ ಒಟ್ಟು 20 ಬಾರಿ 3+ ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಧಿಕ ಮೂರು ಅಥವಾ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

5 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ನಷ್ಟದೊಂದಿಗೆ 168 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 6 ವಿಕೆಟ್​ಗಳ ಜಯ ಸಾಧಿಸಿ ಶುಭಾರಂಭ ಮಾಡಿದೆ.