- Kannada News Photo gallery Cricket photos IPL 2024: Jaydev Unadkat Part of two of the highest totals in IPL
IPL 2024: ಅಂದು RCB ಪರ, ಇಂದು SRH ಪರ: ದಾಖಲೆ ಪಂದ್ಯದಲ್ಲಿ ಕಣಕ್ಕಿಳಿದ ಏಕೈಕ ಆಟಗಾರ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ SRH ತಂಡ 31 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 277 ರನ್ ಕಲೆಹಾಕಿತು. 278 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಹಾರ್ದಿಕ್ ಪಾಂಡ್ಯ ಪಡೆ 246 ರನ್ಗಳಿಸಲಷ್ಟೇ ಶಕ್ತರಾದರು.
Updated on: Mar 28, 2024 | 12:53 PM

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2024) ಸನ್ರೈಸರ್ಸ್ ಹೈದರಾಬಾದ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಹೈದರಾಬಾದ್ನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ SRH ತಂಡ 277 ರನ್ ಕಲೆಹಾಕಿ 11 ವರ್ಷಗಳ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

11 ವರ್ಷಗಳ ಹಿಂದೆ, 2013 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ನಲ್ಲಿ ಗರಿಷ್ಠ ಸ್ಕೋರ್ಗಳಿಸಿದ ದಾಖಲೆ ಬರೆದಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಆರ್‌ಸಿಬಿ 263 ರನ್ ಸಿಡಿಸಿ ಹೊಸ ದಾಖಲೆ ನಿರ್ಮಿಸಿತ್ತು.

ಇದೀಗ ಈ ದಾಖಲೆಯನ್ನು ದಶಕದ ಬಳಿಕ ಅಳಿಸಿ ಹಾಕುವಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಯಶಸ್ವಿಯಾಗಿದೆ. ವಿಶೇಷ ಎಂದರೆ ಈ ಎರಡೂ ದಾಖಲೆಗಳ ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಜಯದೇವ್ ಉನಾದ್ಕಟ್ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಅಂದರೆ 2013 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 263 ರನ್ ಬಾರಿಸಿದ್ದಾಗ, ಜಯದೇವ್ ಆರ್‌ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಭಾಗವಾಗಿದ್ದರು.

ಇದೀಗ 2024 ರಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು 277 ರನ್ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದಾಗಲೂ ಜಯದೇವ್ ಉನಾದ್ಕಟ್ ಎಸ್ಆರ್ಹೆಚ್ ತಂಡ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಮೂಲಕ ಐಪಿಎಲ್ ಇತಿಹಾಸದ ಎರಡು ಗರಿಷ್ಠ ಸ್ಕೋರ್ಗಳ ದಾಖಲೆಗಳ ಪಂದ್ಯದಲ್ಲಿ ಕಣಕ್ಕಿಳಿದ ಏಕೈಕ ಆಟಗಾರನಾಗಿ ಜಯದೇವ್ ಉನಾದ್ಕಟ್ ಗುರುತಿಸಿಕೊಂಡಿದ್ದಾರೆ.
