- Kannada News Photo gallery Cricket photos IPL 2024: Jhye Richardson to miss initial half of IPL 2024
IPL 2024: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಡಬಲ್ ಶಾಕ್: ಇಬ್ಬರು ಆಟಗಾರರಿಗೆ ಗಾಯ..!
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
Updated on: Feb 24, 2024 | 1:53 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಇದರ ಬೆನ್ನಲ್ಲೇ ಕೆಲ ಆಟಗಾರರು ಗಾಯಗೊಳ್ಳುತ್ತಿರುವುದು ಇದೀಗ ಫ್ರಾಂಚೈಸಿಗಳ ಚಿಂತೆಗೆ ಕಾರಣವಾಗಿದೆ. ಅದರಲ್ಲೂ ಬಲಿಷ್ಠ ಪಡೆಯನ್ನು ಕಣಕ್ಕಿಳಿಸುವ ಇರಾದೆಯಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇಬ್ಬರು ಆಟಗಾರರು ಗಾಯಗೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರ ಡೇವಿಡ್ ವಾರ್ನರ್ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿ ವೇಳೆ ತೊಡೆಸಂಧು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ಕಿವೀಸ್ ವಿರುದ್ಧದ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಮುಂಬರುವ ಐಪಿಎಲ್ ವೇಳೆಗೆ ಫಿಟ್ನೆಸ್ ಸಾಧಿಸಲಿದ್ದಾರಾ ಕಾದು ನೋಡಬೇಕಿದೆ.

ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾಗಿರುವ ಆಸ್ಟ್ರೇಲಿಯಾ ವೇಗಿ ಜ್ಯೆ ರಿಚರ್ಡಸನ್ ಗಾಯದ ಕಾರಣ ಐಪಿಎಲ್ನ ಮೊದಲಾರ್ಧಕ್ಕೆ ಅಲಭ್ಯರಾಗುವುದು ಖಚಿತವಾಗಿದೆ. ರಿಚರ್ಡಸನ್ ಸೈಡ್ ಸ್ಟ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆರಂಭಿಕ ಪಂದ್ಯಗಳಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಹ-ಮಾಲೀಕ ಪಾರ್ಥ್ ಜಿಂದಾಲ್ ತಿಳಿಸಿದ್ದಾರೆ.

ಇನ್ನು ಈ ಬಾರಿಯ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ. ಆದರೆ ಅವರು ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವುದರ ಬಗ್ಗೆ ಖಚಿತತೆಯಿಲ್ಲ. ಏಕೆಂದರೆ ಪಂತ್ ಸಂಪೂರ್ಣ ಫಿಟ್ನೆಸ್ ಸಾಧಿಸಿದರೂ ಕೀಪಿಂಗ್ ಮಾಡಲು ಬೇಕಾದ ಚುರುಕುತನ ಹೊಂದಿಲ್ಲ. ಹೀಗಾಗಿ ಅವರು ಈ ಬಾರಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಈ ಬಾರಿಯ ಐಪಿಎಲ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಮಾರ್ಚ್ 23 ರಂದು ನಡೆಯುವ ಈ ಪಂದ್ಯಕ್ಕೆ ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ ಮೂಲಕ ರಿಷಭ್ ಪಂತ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಲಿರುವುದು.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ರಿಷಭ್ ಪಂತ್, ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ತ್ವಾಲ್, ಪೃಥ್ವಿ ಶಾ, ಅನ್ರಿಕ್ ನೋಕಿಯಾ, ಅಭಿಷೇಕ್ ಪೊರೆಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಯಶ್ ಧುಲ್. ಹ್ಯಾರಿ ಬ್ರೂಕ್, ಟ್ರಿಸ್ಟಾನ್ ಸ್ಟಬ್ಸ್, ರಿಕಿ ಭುಯಿ, ಕುಮಾರ್ ಕುಶಾಗ್ರಾ, ರಸಿಖ್ ದಾರ್, ಜ್ಯೆ ರಿಚರ್ಡ್‌ಸನ್, ಸುಮಿತ್ ಕುಮಾರ್, ಶಾಯ್ ಹೋಪ್, ಸ್ವಸ್ತಿಕ್ ಚಿಕಾರಾ.



















