ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿರುವ ಜೋಫ್ರಾ ಆರ್ಚರ್ 40 ಪಂದ್ಯಗಳಿಂದ 48 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಕಳೆದ ಬಾರಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಆರ್ಚರ್, ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಫಿಟ್ನೆಸ್ ಸಮಸ್ಯೆಯ ಕಾರಣ ಹಿಂದೆ ಸರಿದಿದ್ದರು. ಇದೀಗ ಸಂಪೂರ್ಣ ಫಿಟ್ನೆಸ್ನೊಂದಿಗೆ ಜೋಫ್ರಾ ಆರ್ಚರ್ ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿದ್ದು, ಹೀಗಾಗಿ ಐಪಿಎಲ್ಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಡುವ ಸಾಧ್ಯತೆಯಿದೆ.