AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jos Buttler: ಜೋಸ್ ಬಟ್ಲರ್ ಸೆಂಚುರಿಗೆ ಹಲವು ದಾಖಲೆಗಳು ಉಡೀಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 184 ರನ್​ಗಳ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 19.1 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿತು.

TV9 Web
| Updated By: ಝಾಹಿರ್ ಯೂಸುಫ್|

Updated on: Apr 07, 2024 | 8:04 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 19ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಭರ್ಜರಿ ಶತಕ ಬಾರಿಸುವ ಮೂಲಕ ಜೋಸ್ ಬಟ್ಲರ್ (Jos Buttler) ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಬಟ್ಲರ್ 58 ಎಸೆತಗಳನ್ನು ಎದುರಿಸಿ 4 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 100 ರನ್ ಬಾರಿಸಿದ್ದರು.

1 / 7
ಈ ಭರ್ಜರಿ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ 100ನೇ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ವಿದೇಶಿ ಬ್ಯಾಟರ್ ಎಂಬ ದಾಖಲೆ ಜೋಸ್ ಬಟ್ಲರ್ ಪಾಲಾಯಿತು. ಹಾಗೆಯೇ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ 2022 ರಲ್ಲಿ ಕೆಎಲ್ ರಾಹುಲ್ ಈ ಸಾಧನೆ ಮಾಡಿದ್ದರು.

2 / 7
ಇನ್ನು ಈ ಸೆಂಚುರಿಯ ಪ್ರದರ್ಶನಕ್ಕೆ ಜೋಸ್ ಬಟ್ಲರ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿಯಿತು. ಇದರೊಂದಿಗೆ ರಾಜಸ್ಥಾನ್ ರಾಯಲ್ಸ್ ಪರ ಅತೀ ಹೆಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆ ಬಟ್ಲರ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಅಜಿಂಕ್ಯ ರಹಾನೆ (10 ಬಾರಿ) ಹೆಸರಿನಲ್ಲಿತ್ತು. ಇದೀಗ 11ನೇ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ರಾಜಸ್ಥಾನ್ ರಾಯಲ್ಸ್ ಪರ ಬಟ್ಲರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3 / 7
ಹಾಗೆಯೇ 100ನೇ ಐಪಿಎಲ್ ಪಂದ್ಯದಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಕೂಡ ಜೋಸ್ ಬಟ್ಲರ್ ಹೆಸರಿಗೆ ಸೇರ್ಪಡೆಯಾಗಿದೆ. 2022 ರಲ್ಲಿ ಕೆಎಲ್ ರಾಹುಲ್ 60 ಎಸೆತಗಳಲ್ಲಿ ಬರೆದಿದ್ದ ದಾಖಲೆಯನ್ನು ಜೋಸ್ ಬಟ್ಲರ್ 58 ಎಸೆತಗಳಲ್ಲಿ ಮುರಿದಿರುವುದು ವಿಶೇಷ.

4 / 7
ಇನ್ನು ಈ ಸೆಂಚುರಿಯೊಂದಿಗೆ ರಾಜಸ್ಥಾನ್ ರಾಯಲ್ಸ್ ಪರ ಅತೀ ಹೆಚ್ಚು ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ (3389) ಅಗ್ರಸ್ಥಾನದಲ್ಲಿದ್ದರೆ, ಇದೀಗ ಅಜಿಂಕ್ಯ ರಹಾನೆ (2810) ಯನ್ನು ಹಿಂದಿಕ್ಕಿ ಜೋಸ್ ಬಟ್ಲರ್ (2831) ದ್ವಿತೀಯ ಸ್ಥಾನಕ್ಕೇರಿದ್ದಾರೆ.

5 / 7
100ನೇ ಪಂದ್ಯದ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಅದು ಸಹ ಕ್ರಿಸ್ ಗೇಲ್ (6 ಶತಕ) ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (8 ಶತಕ) ಅಗ್ರಸ್ಥಾನದಲ್ಲಿದ್ದರೆ, ಜೋಸ್ ಬಟ್ಲರ್ (6 ಶತಕ) ದ್ವಿತೀಯ ಸ್ಥಾನದಲ್ಲಿದ್ದಾರೆ.

6 / 7
ಒಟ್ಟಿನಲ್ಲಿ ಒಂದು ಭರ್ಜರಿ ಸೆಂಚುರಿಯೊಂದಿಗೆ ಜೋಸ್ ಬಟ್ಲರ್ ಹಲವು ದಾಖಲೆಗಳನ್ನು ಬರೆದಿದ್ದು, ಈ ದಾಖಲೆಯೊಂದಿಗೆ ಆರ್​ಸಿಬಿ ವಿರುದ್ಧ ರಾಜಸ್ಥಾನ್ ರಾಯಲ್ಸ್​ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿರುವುದು ವಿಶೇಷ.

7 / 7
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ

‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ

ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್

ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್

ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ

ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ

ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ

‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ