Jos Buttler: ಜೋಸ್ ಬಟ್ಲರ್ ಸೆಂಚುರಿಗೆ ಹಲವು ದಾಖಲೆಗಳು ಉಡೀಸ್
TV9 Web | Updated By: ಝಾಹಿರ್ ಯೂಸುಫ್
Updated on:
Apr 07, 2024 | 8:04 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ನೀಡಿದ 184 ರನ್ಗಳ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 19.1 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್ಗಳ ಜಯ ಸಾಧಿಸಿತು.
1 / 7
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 19ನೇ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಭರ್ಜರಿ ಶತಕ ಬಾರಿಸುವ ಮೂಲಕ ಜೋಸ್ ಬಟ್ಲರ್ (Jos Buttler) ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಬಟ್ಲರ್ 58 ಎಸೆತಗಳನ್ನು ಎದುರಿಸಿ 4 ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ ಅಜೇಯ 100 ರನ್ ಬಾರಿಸಿದ್ದರು.
2 / 7
ಈ ಭರ್ಜರಿ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ 100ನೇ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ವಿದೇಶಿ ಬ್ಯಾಟರ್ ಎಂಬ ದಾಖಲೆ ಜೋಸ್ ಬಟ್ಲರ್ ಪಾಲಾಯಿತು. ಹಾಗೆಯೇ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ 2022 ರಲ್ಲಿ ಕೆಎಲ್ ರಾಹುಲ್ ಈ ಸಾಧನೆ ಮಾಡಿದ್ದರು.
3 / 7
ಇನ್ನು ಈ ಸೆಂಚುರಿಯ ಪ್ರದರ್ಶನಕ್ಕೆ ಜೋಸ್ ಬಟ್ಲರ್ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿಯಿತು. ಇದರೊಂದಿಗೆ ರಾಜಸ್ಥಾನ್ ರಾಯಲ್ಸ್ ಪರ ಅತೀ ಹೆಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆ ಬಟ್ಲರ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಅಜಿಂಕ್ಯ ರಹಾನೆ (10 ಬಾರಿ) ಹೆಸರಿನಲ್ಲಿತ್ತು. ಇದೀಗ 11ನೇ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ರಾಜಸ್ಥಾನ್ ರಾಯಲ್ಸ್ ಪರ ಬಟ್ಲರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
4 / 7
ಹಾಗೆಯೇ 100ನೇ ಐಪಿಎಲ್ ಪಂದ್ಯದಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಕೂಡ ಜೋಸ್ ಬಟ್ಲರ್ ಹೆಸರಿಗೆ ಸೇರ್ಪಡೆಯಾಗಿದೆ. 2022 ರಲ್ಲಿ ಕೆಎಲ್ ರಾಹುಲ್ 60 ಎಸೆತಗಳಲ್ಲಿ ಬರೆದಿದ್ದ ದಾಖಲೆಯನ್ನು ಜೋಸ್ ಬಟ್ಲರ್ 58 ಎಸೆತಗಳಲ್ಲಿ ಮುರಿದಿರುವುದು ವಿಶೇಷ.
5 / 7
ಇನ್ನು ಈ ಸೆಂಚುರಿಯೊಂದಿಗೆ ರಾಜಸ್ಥಾನ್ ರಾಯಲ್ಸ್ ಪರ ಅತೀ ಹೆಚ್ಚು ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ (3389) ಅಗ್ರಸ್ಥಾನದಲ್ಲಿದ್ದರೆ, ಇದೀಗ ಅಜಿಂಕ್ಯ ರಹಾನೆ (2810) ಯನ್ನು ಹಿಂದಿಕ್ಕಿ ಜೋಸ್ ಬಟ್ಲರ್ (2831) ದ್ವಿತೀಯ ಸ್ಥಾನಕ್ಕೇರಿದ್ದಾರೆ.
6 / 7
100ನೇ ಪಂದ್ಯದ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಸೆಂಚುರಿ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಅದು ಸಹ ಕ್ರಿಸ್ ಗೇಲ್ (6 ಶತಕ) ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (8 ಶತಕ) ಅಗ್ರಸ್ಥಾನದಲ್ಲಿದ್ದರೆ, ಜೋಸ್ ಬಟ್ಲರ್ (6 ಶತಕ) ದ್ವಿತೀಯ ಸ್ಥಾನದಲ್ಲಿದ್ದಾರೆ.
7 / 7
ಒಟ್ಟಿನಲ್ಲಿ ಒಂದು ಭರ್ಜರಿ ಸೆಂಚುರಿಯೊಂದಿಗೆ ಜೋಸ್ ಬಟ್ಲರ್ ಹಲವು ದಾಖಲೆಗಳನ್ನು ಬರೆದಿದ್ದು, ಈ ದಾಖಲೆಯೊಂದಿಗೆ ಆರ್ಸಿಬಿ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿರುವುದು ವಿಶೇಷ.