AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬಟ್ಲರ್​ ಭರ್ಜರಿ ಬ್ಯಾಟಿಂಗ್​ಗೆ ಹಳೆಯ ದಾಖಲೆಗಳು ಧೂಳೀಪಟ

IPL 2024: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​ನ (IPL 2024) 31ನೇ ಪಂದ್ಯದಲ್ಲಿ ಜೋಸ್ ಬಟ್ಲರ್ 60 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 107 ರನ್ ಬಾರಿಸಿ ಮಿಂಚಿದ್ದಾರೆ. ಈ ಭರ್ಜರಿ ಸೆಂಚುರಿಯೊಂದಿಗೆ ಬಟ್ಲರ್ ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಗೇಲ್, ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Apr 17, 2024 | 11:58 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ (Virat Kohli) ಹೆಸರಿನಲ್ಲಿದೆ. ಇನ್ನು ಐಪಿಎಲ್​ನಲ್ಲಿ ವೇಗದ ಸೆಂಚುರಿ ಸಿಡಿಸಿದ ರೆಕಾರ್ಡ್ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಈ ಎರಡು ಶತಕಗಳ ದಾಖಲೆಯ ಹೊರತಾಗಿ ಇದೀಗ ಜೋಸ್ ಬಟ್ಲರ್ (Jos Buttler) ಐಪಿಎಲ್​ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಸಹ ಕಿಂಗ್ ಕೊಹ್ಲಿ-ಕ್ರೀಸ್ ಗೇಲ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಐಪಿಎಲ್​ ಇತಿಹಾಸದಲ್ಲಿ ಶತಕ ಸಿಡಿಸಿ ಪಂದ್ಯ ಗೆಲ್ಲಿಸಿಕೊಟ್ಟ ವಿಶೇಷ ದಾಖಲೆಯೊಂದು ಜೋಸ್ ಬಟ್ಲರ್ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

2 / 6
ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಐಪಿಎಲ್​ನಲ್ಲಿ 6 ಶತಕಗಳನ್ನು ಬಾರಿಸಿದ್ದಾರೆ. ಗೇಲ್ ಶತಕ ಸಿಡಿಸಿದ ಎಲ್ಲಾ ಪಂದ್ಯಗಳಲ್ಲೂ ಆರ್​ಸಿಬಿ/ಪಂಜಾಬ್ ಕಿಂಗ್ಸ್​ ಜಯ ಸಾಧಿಸಿದೆ.

3 / 6
ಇನ್ನು ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 8 ಶತಕಗಳನ್ನು ಸಿಡಿಸಿದ್ದಾರೆ. ಈ ವೇಳೆ ಐದು ಪಂದ್ಯಗಳಲ್ಲಿ ಮಾತ್ರ ಆರ್​ಸಿಬಿ ಗೆದ್ದಿದೆ. ಅಂದರೆ ಕೊಹ್ಲಿ ಸೆಂಚುರಿ ಬಾರಿಸಿದಾಗ ಆರ್​ಸಿಬಿ ತಂಡ ಮೂರು ಪಂದ್ಯಗಳಲ್ಲಿ ಸೋಲನುಭವಿಸಿದೆ.

4 / 6
ಇದೀಗ ಜೋಸ್ ಬಟ್ಲರ್ ಐಪಿಎಲ್​ನಲ್ಲಿ 7ನೇ ಬಾರಿ ಶತಕ ಬಾರಿಸಿದ್ದಾರೆ. ವಿಶೇಷ ಎಂದರೆ ಬಟ್ಲರ್​ ಸೆಂಚುರಿ ಸಿಡಿಸಿದಾಗ ರಾಜಸ್ಥಾನ್ ರಾಯಲ್ಸ್ ತಂಡವು ಒಮ್ಮೆಯೂ ಸೋತಿಲ್ಲ. ಅಂದರೆ ಐಪಿಎಲ್​ ಇತಿಹಾಸದಲ್ಲಿ ಶತಕ ಸಿಡಿಸಿ ಅತೀ ಹೆಚ್ಚು ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ಆಟಗಾರ ಎಂಬ ಹೆಗ್ಗಳಿಕೆಗೆ ಜೋಸ್ ಬಟ್ಲರ್ ಪಾತ್ರರಾಗಿದ್ದಾರೆ.

5 / 6
ಇದೀಗ 7 ಶತಕಗಳೊಂದಿಗೆ ಐಪಿಎಲ್​ ಸೆಂಚುರಿ ಸರದಾರರ ಪಟ್ಟಿಯಲ್ಲಿ ಜೋಸ್ ಬಟ್ಲರ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಬಟ್ಲರ್ ಬ್ಯಾಟ್​ನಿಂದ ಇನ್ನೊಂದು ಶತಕ ಮೂಡಿಬಂದರೆ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ವಿಶೇಷ ದಾಖಲೆಯನ್ನು ಸರಿಗಟ್ಟಬಹುದು. ಹೀಗಾಗಿ ಈ ಬಾರಿಯ ಐಪಿಎಲ್​ ಮೂಲಕ ಕಿಂಗ್ ಕೊಹ್ಲಿ ಹೆಸರಿನಲ್ಲಿರುವ ಸೆಂಚುರಿ ದಾಖಲೆಯನ್ನು ಜೋಸ್ ಬಟ್ಲರ್ ಸರಿಗಟ್ಟಲಿದ್ದಾರಾ ಕಾದು ನೋಡಬೇಕಿದೆ.

6 / 6
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ

ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?

ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!

ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು

ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ

ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!