IPL 2024: 12 ವರ್ಷಗಳ ಬಳಿಕ ಮುಂಬೈನಲ್ಲಿ ಗೆದ್ದು ಬೀಗಿದ KKR

IPL 2024 MI vs KKR: ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು 11 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಅಂದರೆ 2012 ರಲ್ಲಿ ಮೊದಲ ಬಾರಿ ಜಯ ಸಾಧಿಸಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇದೀಗ 12 ವರ್ಷಗಳ ಬಳಿಕ ಮತ್ತೆ ಮುಂಬೈ ಪಡೆಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 04, 2024 | 7:37 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡವು 12 ವರ್ಷಗಳ ಸೋಲಿನ ಸರಪಳಿಯಿಂದ ಹೊರಬಂದಿದೆ.

1 / 6
ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ವಾಂಖೆಡೆ ಸ್ಟೇಡಿಯಂನಲ್ಲಿ ಕಳೆದ 12 ವರ್ಷಗಳಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸಿರಲಿಲ್ಲ. 2012 ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೊನೆಯ ಬಾರಿ ಗೆಲುವು ದಾಖಲಿಸಿತ್ತು. ಇದಾದ ಬಳಿಕ ಸತತ ಸೋಲುಂಡಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈ ಬಾರಿ ಮುಂಬೈ ಇಂಡಿಯನ್ಸ್​ ಪಡೆಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದೆ.

2 / 6
ಈ ಮೂಲಕ 12 ವರ್ಷಗಳ ದೀರ್ಘಾವಧಿಯ ಬಳಿಕ ವಾಂಖೆಡೆ ಸ್ಟೇಡಿಯಂನಲ್ಲಿ ಕೆಕೆಆರ್ ಗೆಲುವಿನ ನಗೆ ಬೀರಿದೆ. ಈ ಗೆಲುವಿನೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ 14 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ.

3 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಅತ್ಯುತ್ತಮ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ ಬೌಲರ್​ಗಳು ಕೆಕೆಆರ್ ತಂಡವನ್ನು 19.5 ಓವರ್​ಗಳಲ್ಲಿ 169 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು.

4 / 6
170 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಅದರಲ್ಲೂ ಕೆಕೆಆರ್ ಸ್ಪಿನ್ನರ್​ಗಳಾದ ಸುನಿಲ್ ನರೈನ್ ಹಾಗೂ ವರುಣ್ ಚಕ್ರವರ್ತಿ ದಾಳಿಯನ್ನು ಎದುರಿಸಲು ತಡಕಾಡಿದ ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದರು.

5 / 6
ಪರಿಣಾಮ ಕೊನೆಯ 12 ಎಸೆತಗಳಲ್ಲಿ 32 ರನ್​​ಗಳ ಅವಶ್ಯಕತೆಯಿತ್ತು. 19ನೇ ಓವರ್​ನಲ್ಲಿ 3 ವಿಕೆಟ್​ ಕಬಳಿಸುವ ಮೂಲಕ ಮಿಚೆಲ್ ಸ್ಟಾರ್ಕ್ ಮುಂಬೈ ಇಂಡಿಯನ್ಸ್ ತಂಡವನ್ನು 18.5 ಓವರ್​ಗಳಲ್ಲಿ 145 ರನ್​ಗಳಿಗೆ ಆಲೌಟ್ ಮಾಡಿದರು. ಈ ಮೂಲಕ 12 ವರ್ಷಗಳ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡದ ತವರು ಮೈದಾನದಲ್ಲಿ 24 ರನ್​ಗಳ ಜಯ ಸಾಧಿಸಿತು.

6 / 6
Follow us
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್

ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ

ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ