IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್ಗಳಲ್ಲಿ 182 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡವು 16.5 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.