IPL 2024: RCB ಕೋಟೆಗೆ ನುಗ್ಗಿ ಹೊಡೆಯೋ KKR

| Updated By: ಝಾಹಿರ್ ಯೂಸುಫ್

Updated on: Mar 30, 2024 | 11:53 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 182 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡವು 16.5 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

1 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ತವರು ಮೈದಾನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈ ನಾಗಾಲೋಟ ಶುರುವಾಗಿದ್ದು ಚೊಚ್ಚಲ ಐಪಿಎಲ್​ನೊಂದಿಗೆ ಎಂಬುದು ವಿಶೇಷ. ಅಂದರೆ 2008 ರಲ್ಲಿ ಆರ್​ಸಿಬಿ ತಂಡಕ್ಕೆ 140 ರನ್​ಗಳ ಹೀನಾಯ ಸೋಲುಣಿಸಿ ಐಪಿಎಲ್ ಅಭಿಯಾನ ಆರಂಭಿಸಿದ ಕೆಕೆಆರ್ ಈಗಲೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ.

2 / 6
ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು. ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದುವರೆಗೆ 12 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 4 ಬಾರಿ ಮಾತ್ರ ಎಂದರೆ ನಂಬಲೇಬೇಕು.

3 / 6
ಅಂದರೆ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 8 ಬಾರಿ ಗೆಲುವು ದಾಖಲಿಸಿದೆ. ಅಚ್ಚರಿ ಎಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 2015 ರ ನಂತರ ಕೆಕೆಆರ್ ವಿರುದ್ಧ ಆರ್​ಸಿಬಿ ಒಂದೇ ಒಂದು ಜಯ ಸಾಧಿಸಿಲ್ಲ. ಅಂದರೆ ಸತತವಾಗಿ 6 ಬಾರಿ ಸೋಲನುಭವಿಸಿದೆ.

4 / 6
ಆರ್​ಸಿಬಿ ತಂಡವು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 2010 ರಲ್ಲಿ ಮೊದಲ ಬಾರಿಗೆ ಜಯ ಸಾಧಿಸಿತ್ತು. ಇದಾದ ಬಳಿಕ 2011, 2013 ರಲ್ಲಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಆ ನಂತರ ಗೆದ್ದಿದ್ದು 2015 ರಲ್ಲಿ. ಇದುವೇ ಕೊನೆ, ಆ ಬಳಿಕ ತನ್ನದೇ ತವರು ಮೈದಾನದಲ್ಲಿ ಕೆಕೆಆರ್​ ತಂಡಕ್ಕೆ ಸೋಲುಣಿಸಲು ಆರ್​ಸಿಬಿ ಪಡೆಗೆ ಸಾಧ್ಯವಾಗಿಲ್ಲ ಎಂಬುದೇ ಆಶ್ಚರ್ಯ.

5 / 6
ಇನ್ನು ಕೆಕೆಆರ್ ತಂಡವು 2008 ರಲ್ಲಿ ಆರ್​ಸಿಬಿ ತಂಡವನ್ನು ಮೊದಲ ಬಾರಿ ಬಗ್ಗು ಬಡಿದರೆ, ಆ ಬಳಿಕ 2012, 2016, 2017, 2018, 2019, 2023 ಮತ್ತು ಇದೀಗ 2024 ರಲ್ಲಿ ಜಯ ಸಾಧಿಸಿದೆ. ಈ ಮೂಲಕ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಕೆಕೆಆರ್ ತಂಡವು ಪಾರುಪತ್ಯ ಮೆರೆಯುತ್ತಾ ಬಂದಿದೆ.

6 / 6
ಅದು ಈ ಬಾರಿ ಕೂಡ ಮುಂದುವರೆದಿದ್ದು, ಒಂದಾರ್ಥದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪಾಲಿಗೆ ತವರು ಮೈದಾನವಾಗಿ ಮಾರ್ಪಟ್ಟಿದೆ. ಇದಕ್ಕೆ ಸಾಕ್ಷಿಯೇ ಈ ಮೈದಾನದಲ್ಲಿ ನಡೆದ ಕಳೆದ 6 ಪಂದ್ಯಗಳಲ್ಲೂ ಆರ್​ಸಿಬಿ ವಿರುದ್ಧ ಕೆಕೆಆರ್ ತಂಡ ಜಯಭೇರಿ ಬಾರಿಸಿರುವುದು.