ಐಪಿಎಲ್ನ (IPL 2024) 42ನೇ ಪಂದ್ಯದಲ್ಲಿ ಸಿಕ್ಸ್ಗಳ ಸುರಿಮಳೆಯಾಗಿದೆ. ಈ ಸಿಕ್ಸ್ಗಳಿಂದಲೇ ಇದೀಗ ಹೊಸ ವಿಶ್ವ ದಾಖಲೆ ಕೂಡ ನಿರ್ಮಾಣವಾಗಿದೆ. ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 261 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.4 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.