IPL 2024: ಐಪಿಎಲ್ನ 2 ಪಂದ್ಯಗಳ ದಿನಾಂಕ ಬದಲು
TV9 Web | Updated By: ಝಾಹಿರ್ ಯೂಸುಫ್
Updated on:
Apr 02, 2024 | 4:46 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರ ಎರಡು ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಲಾಗಿದೆ. ಏಪ್ರಿಲ್ 17 ರಂದು ರಾಮನವಮಿ ನಡೆಯಲಿದ್ದು, ಈ ಕಾರಣದಿಂದಾಗಿ 2 ಪಂದ್ಯಗಳ ದಿನಾಂಕವನ್ನು ಬಿಸಿಸಿಐ ಬದಲಿಸಿದೆ. ಅದರಂತೆ ಕೆಕೆಆರ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ನಡೆಯಲಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 31ನೇ ಮತ್ತು 32ನೇ ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ನಡೆಯಲಿದೆ ಎಂದು ತಿಳಿಸಿದೆ.
2 / 5
ಈ ಹಿಂದೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವನ್ನು ಏಪ್ರಿಲ್ 17 ರಂದು ನಿಗದಿ ಮಾಡಲಾಗಿತ್ತು. ಇದೀಗ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವನ್ನು ಏಪ್ರಿಲ್ 16 ಕ್ಕೆ ಮರುನಿಗದಿ ಮಾಡಲಾಗಿದೆ. ಅದರಂತೆ ಕೆಕೆಆರ್ ಮತ್ತು ಆರ್ಆರ್ ನಡುವಣ ಪಂದ್ಯ ಒಂದು ದಿನ ಮುಂಚಿತವಾಗಿ ಜರುಗಲಿದೆ.
3 / 5
ಹಾಗೆಯೇ ಏಪ್ರಿಲ್ 16 ರಂದು ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಒಂದು ದಿನ ತಡವಾಗಿ ಆಯೋಜಿಸಲಾಗುತ್ತಿದೆ. ಅದರಂತೆ ಏಪ್ರಿಲ್ 17 ರಂದು ಅಹಮದಾಬಾದ್ನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿದೆ.
4 / 5
ಈ ಪಂದ್ಯಗಳ ಮರುನಿಗದಿ ಬಗ್ಗೆ ಬಿಸಿಸಿಐ ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ. ಆದರೆ ರಾಮನವಮಿ ಪ್ರಯುಕ್ತ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಏಪ್ರಿಲ್ 17 ರಂದು ರಾಮನವಮಿ ನಡೆಯಲಿದ್ದು, ಈ ವೇಳೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಸಂಪೂರ್ಣ ಭದ್ರತೆ ಒದಗಿಸುವುದು ಕಷ್ಟಕರ. ಹೀಗಾಗಿ ಪಂದ್ಯವನ್ನು ಮರುನಿಗದಿ ಮಾಡುವಂತೆ ಕೊಲ್ಕತ್ತಾ ಪೊಲೀಸ್ ಕಮಿಷನರ್ ಬಿಸಿಸಿಐಗೆ ಮನವಿ ಮಾಡಿದ್ದರು ಎಂದು ತಿಳಿದು ಬಂದಿದೆ.
5 / 5
ಅದರಂತೆ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ನಡೆದರೆ, ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಒಂದು ದಿನ ತಡವಾಗಿ ಜರುಗಲಿದೆ.
Published On - 4:40 pm, Tue, 2 April 24