IPL 2024: ಧೋನಿ ದಾಖಲೆ ಮುರಿದ ಕೆಎಲ್ ರಾಹುಲ್

| Updated By: ಝಾಹಿರ್ ಯೂಸುಫ್

Updated on: Apr 20, 2024 | 7:41 AM

IPL 2024: ಐಪಿಎಲ್ 2024 ರಲ್ಲಿ 2 ಅರ್ಧಶತಕಗಳನ್ನು ಬಾರಿಸುವ ಮೂಲಕ ಕೆಎಲ್ ರಾಹುಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಭರ್ಜರಿ ದಾಖಲೆಗಳ ಸರದಾರ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ವಿಶೇಷ ರೆಕಾರ್ಡ್ ಅನ್ನು ಬ್ರೇಕ್ ಮಾಡುವ ಮೂಲಕ ಎಂಬುದು ವಿಶೇಷ. ಕೆಎಲ್ ರಾಹುಲ್ ಬರೆದ ನೂತನ ದಾಖಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 7
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 34ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಕೆಎಲ್ ರಾಹುಲ್ (KL Rahul) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಸರಿನಲ್ಲಿದ್ದ ರೆಕಾರ್ಡ್​ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 7
ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್​ ಕಲೆಹಾಕಿತು.

3 / 7
ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್​ಗೆ 134 ರನ್ ಪೇರಿಸಿ ಡಿಕಾಕ್ (54) ಔಟಾದರು. ಮತ್ತೊಂದೆಡೆ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು.

4 / 7
ಆಕರ್ಷಕ ಹೊಡೆತಗಳೊಂದಿಗೆ ಗಮನ ಸೆಳೆದ ಕೆಎಲ್ ರಾಹುಲ್ 53 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 82 ರನ್ ಬಾರಿಸಿದರು. ಈ ಅರ್ಧಶತಕದೊಂದಿಗೆ ಐಪಿಎಲ್​ನಲ್ಲಿ ಅತೀ ಹೆಚ್ಚು ಹಾಫ್ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್ ಎನಿಸಿಕೊಂಡರು.

5 / 7
ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. 223 ಐಪಿಎಲ್ ಇನಿಂಗ್ಸ್​​ಗಳ ಮೂಲಕ 24 ಅರ್ಧಶತಕ ಬಾರಿಸಿ ಧೋನಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಕೆಎಲ್​ಆರ್​ ಯಶಸ್ವಿಯಾಗಿದ್ದಾರೆ.

6 / 7
116 ಐಪಿಎಲ್​ ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಇದುವರೆಗೆ 35 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ವೇಳೆ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಾಗ 25 ಹಾಫ್ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಧೋನಿ ಹೆಸರಿನಲ್ಲಿದ್ದ 24 ಅರ್ಧಶತಕಗಳ ದಾಖಲೆಯನ್ನು ಕೆಎಲ್ ರಾಹುಲ್ ಮುರಿದಿದ್ದಾರೆ.

7 / 7
ಇನ್ನು ಕೆಎಲ್ ರಾಹುಲ್ (82) ಅವರ ಅರ್ಧಶತಕದ ನೆರವಿನಿಂದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 19 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಈ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.