AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೊನೆಗೂ ಹ್ಯಾಟ್ರಿಕ್ ಗೆಲುವು ಕಂಡ KKR

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಂಡಿರುವುದು ಕೇವಲ 2 ತಂಡಗಳು ಮಾತ್ರ. ಈ ಪಟ್ಟಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಈ ಎರಡು ತಂಡಗಳನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳು ಮೊದಲ ಮೂರು ಮ್ಯಾಚ್​ಗಳಲ್ಲಿ ಕನಿಷ್ಠ ಒಂದು ಸೋಲು ಕಂಡಿದೆ.

TV9 Web
| Edited By: |

Updated on: Apr 04, 2024 | 7:28 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಶುರುವಾಗಿ 16 ವರ್ಷಗಳೇ ಕಳೆದಿವೆ. ಇದುವರೆ 16 ಸೀಸನ್​ಗಳನ್ನು ಆಡಲಾಗಿದ್ದು, ಇದೀಗ 17ನೇ ಸೀಸನ್ ಚಾಲ್ತಿಯಲ್ಲಿದೆ. ಈ ಎಲ್ಲಾ ಸೀಸನ್​ಗಳನ್ನು ಆಡಿದ ತಂಡಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಕೂಡ ಒಂದು. ಆದರೆ ಕಳೆದ ಹದಿನಾರು ಸೀಸನ್​ಗಳಲ್ಲಿ ಒಮ್ಮೆಯೂ ಕೆಕೆಆರ್ ಮೊದಲ ಮೂರು ಪಂದ್ಯಗಳನ್ನು ಗೆದ್ದಿರಲಿಲ್ಲ ಎಂಬುದು ವಿಶೇಷ.

1 / 5
ಆದರೆ ಈ ಬಾರಿ ಕೆಕೆಆರ್ ಬಾಯ್ಸ್ ಹೊಸ ಅಧ್ಯಾಯ ಬರೆದಿದ್ದಾರೆ. ಅದು ಸಹ ಭರ್ಜರಿ ಗೆಲುವುಗಳ ಮೂಲಕ ಎಂಬುದು ವಿಶೇಷ. ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ 4 ರನ್​ಗಳ ರೋಚಕ ಜಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ್ದ ಕೆಕೆಆರ್, ಆ ಬಳಿಕ ಆರ್​ಸಿಬಿ ವಿರುದ್ಧ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

2 / 5
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೆಕೆಆರ್ 106 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್​ ಸೀಸನ್​ನ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ. ಇದರೊಂದಿಗೆ ಕಳೆದ 16 ಸೀಸನ್​ಗಳಲ್ಲಿ ಸಾಧ್ಯವಾಗದ ಉತ್ತಮ ಆರಂಭವನ್ನು ಪಡೆಯುವಲ್ಲಿ ಕೆಕೆಆರ್ ಪಡೆ ಯಶಸ್ವಿಯಾಗಿದೆ.

3 / 5
ಸದ್ಯ ಮೂರು ಗೆಲುವುಗಳೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದು, ಒಟ್ಟು 6 ಅಂಕಗಳನ್ನು ಹೊಂದಿದೆ. ಹಾಗೆಯೇ ಕೆಕೆಆರ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +2.518 ಇರುವುದು ವಿಶೇಷ. ಅಂದರೆ ಆರಂಭದಲ್ಲೇ ಉತ್ತಮ ರನ್ ರೇಟ್ ಸಂಪಾದಿಸುವಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಯಶಸ್ವಿಯಾಗಿದೆ.

4 / 5
ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ತನ್ನ ಮುಂದಿನ ಪಂದ್ಯವನ್ನು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಆಡಲಿದೆ. ಏಪ್ರಿಲ್ 8 ರಂದು ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಕೆಕೆಆರ್ ಆಟಗಾರರಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

5 / 5
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ