AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನಿಂದ 10 ಆಟಗಾರರು ಔಟ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಿಂದ 10 ಆಟಗಾರರು ಹೊರಗುಳಿದಿದ್ದಾರೆ. ಈ ಹತ್ತು ಆಟಗಾರರಲ್ಲಿ ಇಬ್ಬರು ಭಾರತೀಯ ಬೌಲರ್​ಗಳು ಕೂಡ ಇದ್ದಾರೆ. ಅಂದರೆ ಈ ಬಾರಿಯ ಐಪಿಎಲ್​ನಿಂದ ಟೀಮ್ ಇಂಡಿಯಾದ ಇಬ್ಬರು ವೇಗಿಗಳು ಸೇರಿದಂತೆ ಒಟ್ಟು 10 ಆಟಗಾರರು ಹಿಂದೆ ಸರಿದಿದ್ದಾರೆ. IPL 2024 ರಿಂದ ಹೊರಗುಳಿದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ..,

TV9 Web
| Edited By: |

Updated on: Mar 21, 2024 | 9:57 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​ 17 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಆದರೆ ಇತ್ತ ಐಪಿಎಲ್​ನ ಕೆಲ ತಂಡಗಳಿಂದ ಸ್ಟಾರ್ ಆಟಗಾರರು ಹೊರಗುಳಿದಿದ್ದಾರೆ. ಆ ಆಟಗಾರರು ಯಾರು? ಯಾವ ತಂಡದಿಂದ ಹೊರಗುಳಿದಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 11
1- ಮೊಹಮ್ಮದ್ ಶಮಿ: ಗುಜರಾತ್ ಟೈಟಾನ್ಸ್ ತಂಡದ ವೇಗಿ ಮೊಹಮ್ಮದ್ ಶಮಿ ಈ ಬಾರಿಯ ಐಪಿಎಲ್​ನಲ್ಲಿ ಕಣಕ್ಕಿಳಿಯುವುದಿಲ್ಲ. ಹಿಮ್ಮಡಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣ ಅವರು ಟೂರ್ನಿಯಿಂದ ಹೊರಗುಳಿದಿದ್ದಾರೆ.

2 / 11
2- ಗಸ್ ಅಟ್ಕಿನ್ಸನ್: ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಕೆಲಸದ ಒತ್ತಡದ ಕಾರಣ ಅಟ್ಕಿನ್ಸನ್ ಕೂಡ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

3 / 11
3- ಮಾರ್ಕ್​ ವುಡ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಾರ್ಕ್ ವುಡ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವೇಗಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

4 / 11
4- ಹ್ಯಾರಿ ಬ್ರೂಕ್: ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಇಂಗ್ಲೆಂಡ್​ನ ಸ್ಪೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಕೂಡ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಈ ಬಾರಿ ಐಪಿಎಲ್ ಆಡುತ್ತಿಲ್ಲ ಎಂದು ಬ್ರೂಕ್ ತಿಳಿಸಿದ್ದಾರೆ.

5 / 11
5- ಜೇಸನ್ ಬೆಹ್ರೆಂಡ್ರಾಫ್: ಐಪಿಎಲ್​ಗಾಗಿ ಸಿದ್ಧತೆಯಲ್ಲಿದ್ದ ಆಸ್ಟ್ರೇಲಿಯಾ ವೇಗಿ ಜೇಸನ್ ಬೆಹ್ರೆಂಡ್ರಾಫ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಮುಂಬೈ ಇಂಡಿಯನ್ಸ್ ತಂಡದಿಂದ ಅವರು ಹೊರಗುಳಿದಿದ್ದಾರೆ.

6 / 11
6- ದಿಲ್ಶನ್ ಮಧುಶಂಕ: ಮುಂಬೈ ಇಂಡಿಯನ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಶ್ರೀಲಂಕಾ ತಂಡದ ಎಡಗೈ ವೇಗಿ ದಿಲ್ಶನ್ ಮಧುಶಂಕ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿ ವೇಳೆ ಗಾಯಗೊಂಡಿದ್ದರು. ಈ ಹಿನ್ನಲೆಯಲ್ಲಿ ಲಂಕಾ ಬೌಲರ್​ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

7 / 11
7- ಜೇಸನ್ ರಾಯ್: ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯಬೇಕಿತ್ತು. ಆದರೀಗ ವೈಯುಕ್ತಿಕ ಕಾರಣಗಳನ್ನು ಮುಂದಿಟ್ಟು ರಾಯ್ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

8 / 11
8- ರಾಬಿನ್ ಮಿಂಝ್: ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಬೇಕಿದ್ದ ಜಾರ್ಖಂಡ್​ನ ಯುವ ಆಟಗಾರ ರಾಬಿನ್ ಮಿಂಝ್ ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಇದೀಗ ವೈದ್ಯರು ವಿಶ್ರಾಂತಿ ಸೂಚಿಸಿರುವ ಕಾರಣ ಅವರು ಸಹ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

9 / 11
9- ಪ್ರಸಿದ್ಧ್ ಕೃಷ್ಣ: ಭಾರತ ತಂಡದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರು ಎಡ ಪ್ರಾಕ್ಸಿಮಲ್ ಕ್ವಾಡ್ರೈಸ್ಪ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಅವರು ಕೂಡ ಈ ಬಾರಿಯ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ.

10 / 11
10- ಲುಂಗಿ ಎನ್​ಗಿಡಿ: ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

11 / 11
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ

ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್