IPL 2024: ಐಪಿಎಲ್ನಿಂದ 10 ಆಟಗಾರರು ಔಟ್
TV9 Web | Updated By: ಝಾಹಿರ್ ಯೂಸುಫ್
Updated on:
Mar 21, 2024 | 9:57 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಿಂದ 10 ಆಟಗಾರರು ಹೊರಗುಳಿದಿದ್ದಾರೆ. ಈ ಹತ್ತು ಆಟಗಾರರಲ್ಲಿ ಇಬ್ಬರು ಭಾರತೀಯ ಬೌಲರ್ಗಳು ಕೂಡ ಇದ್ದಾರೆ. ಅಂದರೆ ಈ ಬಾರಿಯ ಐಪಿಎಲ್ನಿಂದ ಟೀಮ್ ಇಂಡಿಯಾದ ಇಬ್ಬರು ವೇಗಿಗಳು ಸೇರಿದಂತೆ ಒಟ್ಟು 10 ಆಟಗಾರರು ಹಿಂದೆ ಸರಿದಿದ್ದಾರೆ. IPL 2024 ರಿಂದ ಹೊರಗುಳಿದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ..,
1 / 11
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಆದರೆ ಇತ್ತ ಐಪಿಎಲ್ನ ಕೆಲ ತಂಡಗಳಿಂದ ಸ್ಟಾರ್ ಆಟಗಾರರು ಹೊರಗುಳಿದಿದ್ದಾರೆ. ಆ ಆಟಗಾರರು ಯಾರು? ಯಾವ ತಂಡದಿಂದ ಹೊರಗುಳಿದಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...
2 / 11
1- ಮೊಹಮ್ಮದ್ ಶಮಿ: ಗುಜರಾತ್ ಟೈಟಾನ್ಸ್ ತಂಡದ ವೇಗಿ ಮೊಹಮ್ಮದ್ ಶಮಿ ಈ ಬಾರಿಯ ಐಪಿಎಲ್ನಲ್ಲಿ ಕಣಕ್ಕಿಳಿಯುವುದಿಲ್ಲ. ಹಿಮ್ಮಡಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣ ಅವರು ಟೂರ್ನಿಯಿಂದ ಹೊರಗುಳಿದಿದ್ದಾರೆ.
3 / 11
2- ಗಸ್ ಅಟ್ಕಿನ್ಸನ್: ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಕೆಲಸದ ಒತ್ತಡದ ಕಾರಣ ಅಟ್ಕಿನ್ಸನ್ ಕೂಡ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ.
4 / 11
3- ಮಾರ್ಕ್ ವುಡ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಾರ್ಕ್ ವುಡ್ ಐಪಿಎಲ್ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವೇಗಿ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ.
5 / 11
4- ಹ್ಯಾರಿ ಬ್ರೂಕ್: ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಇಂಗ್ಲೆಂಡ್ನ ಸ್ಪೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಕೂಡ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಈ ಬಾರಿ ಐಪಿಎಲ್ ಆಡುತ್ತಿಲ್ಲ ಎಂದು ಬ್ರೂಕ್ ತಿಳಿಸಿದ್ದಾರೆ.
6 / 11
5- ಜೇಸನ್ ಬೆಹ್ರೆಂಡ್ರಾಫ್: ಐಪಿಎಲ್ಗಾಗಿ ಸಿದ್ಧತೆಯಲ್ಲಿದ್ದ ಆಸ್ಟ್ರೇಲಿಯಾ ವೇಗಿ ಜೇಸನ್ ಬೆಹ್ರೆಂಡ್ರಾಫ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಮುಂಬೈ ಇಂಡಿಯನ್ಸ್ ತಂಡದಿಂದ ಅವರು ಹೊರಗುಳಿದಿದ್ದಾರೆ.
7 / 11
6- ದಿಲ್ಶನ್ ಮಧುಶಂಕ: ಮುಂಬೈ ಇಂಡಿಯನ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಶ್ರೀಲಂಕಾ ತಂಡದ ಎಡಗೈ ವೇಗಿ ದಿಲ್ಶನ್ ಮಧುಶಂಕ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿ ವೇಳೆ ಗಾಯಗೊಂಡಿದ್ದರು. ಈ ಹಿನ್ನಲೆಯಲ್ಲಿ ಲಂಕಾ ಬೌಲರ್ ಐಪಿಎಲ್ನಿಂದ ಹೊರಗುಳಿದಿದ್ದಾರೆ.
8 / 11
7- ಜೇಸನ್ ರಾಯ್: ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ಈ ಬಾರಿಯ ಐಪಿಎಲ್ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯಬೇಕಿತ್ತು. ಆದರೀಗ ವೈಯುಕ್ತಿಕ ಕಾರಣಗಳನ್ನು ಮುಂದಿಟ್ಟು ರಾಯ್ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ.
9 / 11
8- ರಾಬಿನ್ ಮಿಂಝ್: ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಬೇಕಿದ್ದ ಜಾರ್ಖಂಡ್ನ ಯುವ ಆಟಗಾರ ರಾಬಿನ್ ಮಿಂಝ್ ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಇದೀಗ ವೈದ್ಯರು ವಿಶ್ರಾಂತಿ ಸೂಚಿಸಿರುವ ಕಾರಣ ಅವರು ಸಹ ಐಪಿಎಲ್ನಿಂದ ಹೊರಗುಳಿದಿದ್ದಾರೆ.
10 / 11
9- ಪ್ರಸಿದ್ಧ್ ಕೃಷ್ಣ: ಭಾರತ ತಂಡದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರು ಎಡ ಪ್ರಾಕ್ಸಿಮಲ್ ಕ್ವಾಡ್ರೈಸ್ಪ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಅವರು ಕೂಡ ಈ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ.
11 / 11
10- ಲುಂಗಿ ಎನ್ಗಿಡಿ: ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್ಗಿಡಿ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ.