IPL 2024: ಐಪಿಎಲ್​ನಿಂದ ಹಿಂದೆ ಸರಿದ ಇಂಗ್ಲೆಂಡ್​ನ ನಾಲ್ವರು ಆಟಗಾರರು

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್​) ಸೀಸನ್-17 ಆರಂಭಕ್ಕೂ ಮುನ್ನವೇ ಕೆಲ ಆಟಗಾರರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇವರಲ್ಲಿ ಬಹುತೇಕರು ಇಂಗ್ಲೆಂಡ್ ಆಟಗಾರರು ಎಂಬುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಸ್ಥಾನ ಪಡೆದು ಇದೀಗ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. ಇದರಿಂದ ಐಪಿಎಲ್​ ಫ್ರಾಂಚೈಸಿಗಳು ಸಂಕಷ್ಟಕ್ಕೆ ಸಿಲುಕಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 14, 2024 | 11:53 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನವೇ ಐಪಿಎಲ್ ಫ್ರಾಂಚೈಸಿಗಳಿಗೆ ಹೊಸ ಚಿಂತೆ ಶುರುವಾಗಿದೆ. ಅದು ಕೂಡ ಇಂಗ್ಲೆಂಡ್ ಆಟಗಾರರಿಂದ ಎಂಬುದು ವಿಶೇಷ. ಅಂದರೆ ಈ ಬಾರಿಯ ಹರಾಜಿನ ಮೂಲಕ ಆಯ್ಕೆಯಾಗಿದ್ದ ಇಂಗ್ಲೆಂಡ್​ನ ಕೆಲ ಆಟಗಾರರು ಇದೀಗ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

1 / 9
ಟೂರ್ನಿ ಆರಂಭಕ್ಕೆ ವಾರ ಮಾತ್ರ ಉಳಿದಿರುವಾಗ ದಿಢೀರ್ ಆಗಿ ಹಿಂದೆ ಸರಿದರೆ ಅದು ಫ್ರಾಂಚೈಸಿಗಳ ಪಾಲಿಗೆ ಹಿನ್ನಡೆಯನ್ನುಂಟು ಮಾಡುತ್ತದೆ. ಏಕೆಂದರೆ ಕೆಲವೇ ದಿನಗಳ ಅಂತರದಲ್ಲಿ ಸಮರ್ಥ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ತಂಡಗಳ ಮೇಲೆ ಇರಲಿದೆ. ಇದೇ ಕಾರಣದಿಂದಾಗಿ ಇದೀಗ ಇಂಗ್ಲೆಂಡ್‌ ಕ್ರಿಕೆಟಿಗರ ಈ ನಡೆಯಿಂದ ಬೇಸತ್ತಿರುವ ಐಪಿಎಲ್ ಫ್ರಾಂಚೈಸಿಗಳು ಬಿಸಿಸಿಐಗೆ ದೂರು ನೀಡಿವೆ.

2 / 9
ಹೀಗೆ ಈ ಬಾರಿಯ ಐಪಿಎಲ್​ನಲ್ಲಿ ಸ್ಥಾನ ಪಡೆದು, ಇದೀಗ ಟೂರ್ನಿಯಿಂದ ಹಿಂದೆ ಸರಿದಿರುವ ಇಂಗ್ಲೆಂಡ್​ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 9
1- ಗಸ್ ಅಟ್ಕಿನ್ಸನ್: ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ತಂಡದ ವೇಗದ ಬೌಲರ್ ಗಸ್ ಅಟ್ಕಿನ್ಸನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ 1 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ ಇದೀಗ ಅಟ್ಕಿನ್ಸನ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಅವರ ಬದಲಿಗೆ ಶ್ರೀಲಂಕಾದ ವೇಗಿ ದುಷ್ಮಂತ ಚಮೀರಾ ಕೆಕೆಆರ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

4 / 9
2- ಮಾರ್ಕ್​ ವುಡ್: ಲಕ್ನೋ ಸೂಪರ್ ಜೈಂಟ್ಸ್ ತಂಡವು ಇಂಗ್ಲೆಂಡ್ ವೇಗಿ ಮಾರ್ಕ್ ವುಡ್ ಅವರನ್ನು ಈ ಬಾರಿಯ ಐಪಿಎಲ್​ಗಾಗಿ ರಿಟೈನ್ ಮಾಡಿಕೊಂಡಿತ್ತು. ಆದರೆ ಐಪಿಎಲ್ ಸೀಸನ್-17 ರಿಂದ ಇದೀಗ ಮಾರ್ಕ್​ ವುಡ್ ಕೂಡ ಹೊರಗುಳಿದಿದ್ದಾರೆ. ಇವರ ಬದಲಿ ಆಟಗಾರನಾಗಿ ಇದೀಗ ಲಕ್ನೋ ಫ್ರಾಂಚೈಸಿ ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

5 / 9
3- ಜೇಸನ್ ರಾಯ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಆರಂಭಿಕನಾಗಿ ಸ್ಥಾನ ಪಡೆದಿದ್ದ ಇಂಗ್ಲೆಂಡ್ ಬ್ಯಾಟರ್ ಜೇಸನ್ ರಾಯ್ ಕೆಕೆಆರ್ ತಂಡಕ್ಕೆ ಕೈಕೊಟ್ಟಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್​ನಿಂದ ಹಿಂದೆ ಸರಿದಿರುವ ರಾಯ್ ಬದಲಿಗೆ ಇದೀಗ ಕೆಕೆಆರ್ ಫಿಲ್ ಸಾಲ್ಟ್ ಅವರನ್ನು ಆಯ್ಕೆ ಮಾಡಿದೆ.

6 / 9
4- ಹ್ಯಾರಿ ಬ್ರೂಕ್: ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ಕೋಟಿ ರೂ. ನೀಡಿ ಖರೀದಿಸಿದ್ದ ಇಂಗ್ಲೆಂಡ್ ತಂಡದ ಸ್ಪೋಟಕ ಬ್ಯಾಟರ್ ವೈಯುಕ್ತಿಕ ಕಾರಣ ನೀಡಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅವರ ಬದಲಿ ಆಟಗಾರನ ಹುಡುಕಾಟದಲ್ಲಿ ನಿರತವಾಗಿದೆ.

7 / 9
ಇನ್ನು ಕೆಲ ಆಂಗ್ಲ ಆಟಗಾರರು ಅರ್ಧದಲ್ಲೇ ಐಪಿಎಲ್ ತೊರೆಯಲಿದ್ದಾರೆ ಎನ್ನಲಾಗುತ್ತಿದೆ. ಏಕೆಂದರೆ ಮೇ ತಿಂಗಳಲ್ಲಿ ಇಂಗ್ಲೆಂಡ್ ಪಾಕಿಸ್ತಾನ್ ವಿರುದ್ಧ ಟಿ20 ಸರಣಿ ಆಡಬೇಕಿದೆ. ಈ ಸರಣಿಯು ಮೇ 22 ರಂದು ಪ್ರಾರಂಭವಾಗಲಿದ್ದು, 2024ರ T20 ವಿಶ್ವಕಪ್‌ಗೆ ಮುಂಚಿತವಾಗಿ ಇದು ನಿರ್ಣಾಯಕ ಅಭ್ಯಾಸ ಸರಣಿಯಾಗಿದೆ. ಹೀಗಾಗಿ ಇಂಗ್ಲೆಂಡ್ ಆಟಗಾರರು ಅರ್ಧದಲ್ಲೇ ಐಪಿಎಲ್ ತೊರೆಯುವ ಸಾಧ್ಯತೆಯಿದೆ.

8 / 9
ಐಪಿಎಲ್​ನಲ್ಲಿರುವ ಇಂಗ್ಲೆಂಡ್ ಆಟಗಾರರು: ಮೊಯೀನ್ ಅಲಿ (ಚೆನ್ನೈ ಸೂಪರ್ ಕಿಂಗ್ಸ್​​), ಲಿಯಾಮ್ ಲಿವಿಂಗ್​ಸ್ಟೋನ್, ಸ್ಯಾಮ್ ಕರನ್, ಜಾನಿ ಬೈರ್‌ಸ್ಟೋವ್, ಕ್ರಿಸ್ ವೋಕ್ಸ್ (ಪಂಜಾಬ್ ಕಿಂಗ್ಸ್​), ಜೋಸ್ ಬಟ್ಲರ್, ಟಾಮ್ ಕೊಹ್ಲರ್-ಕ್ಯಾಡ್ಮೋರ್ (ರಾಜಸ್ಥಾನ್ ರಾಯಲ್ಸ್​), ವಿಲ್ ಜಾಕ್ಸ್, ರೀಸ್ ಟೋಪ್ಲಿ, ಟಾಮ್ ಕರನ್ (ಆರ್​ಸಿಬಿ), ಡೇವಿಡ್ ವಿಲ್ಲಿ (ಲಕ್ನೋ ಸೂಪರ್ ಜೈಂಟ್ಸ್​).

9 / 9
Follow us
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್

ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ

ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು

ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ

ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು