IPL 2024: ಐಪಿಎಲ್ನಿಂದ ಹಿಂದೆ ಸರಿದ ಇಂಗ್ಲೆಂಡ್ನ ನಾಲ್ವರು ಆಟಗಾರರು
TV9 Web | Updated By: ಝಾಹಿರ್ ಯೂಸುಫ್
Updated on:
Mar 14, 2024 | 11:53 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-17 ಆರಂಭಕ್ಕೂ ಮುನ್ನವೇ ಕೆಲ ಆಟಗಾರರು ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ. ಇವರಲ್ಲಿ ಬಹುತೇಕರು ಇಂಗ್ಲೆಂಡ್ ಆಟಗಾರರು ಎಂಬುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್ನಲ್ಲಿ ಸ್ಥಾನ ಪಡೆದು ಇದೀಗ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. ಇದರಿಂದ ಐಪಿಎಲ್ ಫ್ರಾಂಚೈಸಿಗಳು ಸಂಕಷ್ಟಕ್ಕೆ ಸಿಲುಕಿದೆ.
1 / 9
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನವೇ ಐಪಿಎಲ್ ಫ್ರಾಂಚೈಸಿಗಳಿಗೆ ಹೊಸ ಚಿಂತೆ ಶುರುವಾಗಿದೆ. ಅದು ಕೂಡ ಇಂಗ್ಲೆಂಡ್ ಆಟಗಾರರಿಂದ ಎಂಬುದು ವಿಶೇಷ. ಅಂದರೆ ಈ ಬಾರಿಯ ಹರಾಜಿನ ಮೂಲಕ ಆಯ್ಕೆಯಾಗಿದ್ದ ಇಂಗ್ಲೆಂಡ್ನ ಕೆಲ ಆಟಗಾರರು ಇದೀಗ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ.
2 / 9
ಟೂರ್ನಿ ಆರಂಭಕ್ಕೆ ವಾರ ಮಾತ್ರ ಉಳಿದಿರುವಾಗ ದಿಢೀರ್ ಆಗಿ ಹಿಂದೆ ಸರಿದರೆ ಅದು ಫ್ರಾಂಚೈಸಿಗಳ ಪಾಲಿಗೆ ಹಿನ್ನಡೆಯನ್ನುಂಟು ಮಾಡುತ್ತದೆ. ಏಕೆಂದರೆ ಕೆಲವೇ ದಿನಗಳ ಅಂತರದಲ್ಲಿ ಸಮರ್ಥ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ತಂಡಗಳ ಮೇಲೆ ಇರಲಿದೆ. ಇದೇ ಕಾರಣದಿಂದಾಗಿ ಇದೀಗ ಇಂಗ್ಲೆಂಡ್ ಕ್ರಿಕೆಟಿಗರ ಈ ನಡೆಯಿಂದ ಬೇಸತ್ತಿರುವ ಐಪಿಎಲ್ ಫ್ರಾಂಚೈಸಿಗಳು ಬಿಸಿಸಿಐಗೆ ದೂರು ನೀಡಿವೆ.
3 / 9
ಹೀಗೆ ಈ ಬಾರಿಯ ಐಪಿಎಲ್ನಲ್ಲಿ ಸ್ಥಾನ ಪಡೆದು, ಇದೀಗ ಟೂರ್ನಿಯಿಂದ ಹಿಂದೆ ಸರಿದಿರುವ ಇಂಗ್ಲೆಂಡ್ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...
4 / 9
1- ಗಸ್ ಅಟ್ಕಿನ್ಸನ್: ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ತಂಡದ ವೇಗದ ಬೌಲರ್ ಗಸ್ ಅಟ್ಕಿನ್ಸನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ 1 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ ಇದೀಗ ಅಟ್ಕಿನ್ಸನ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಅವರ ಬದಲಿಗೆ ಶ್ರೀಲಂಕಾದ ವೇಗಿ ದುಷ್ಮಂತ ಚಮೀರಾ ಕೆಕೆಆರ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
5 / 9
2- ಮಾರ್ಕ್ ವುಡ್: ಲಕ್ನೋ ಸೂಪರ್ ಜೈಂಟ್ಸ್ ತಂಡವು ಇಂಗ್ಲೆಂಡ್ ವೇಗಿ ಮಾರ್ಕ್ ವುಡ್ ಅವರನ್ನು ಈ ಬಾರಿಯ ಐಪಿಎಲ್ಗಾಗಿ ರಿಟೈನ್ ಮಾಡಿಕೊಂಡಿತ್ತು. ಆದರೆ ಐಪಿಎಲ್ ಸೀಸನ್-17 ರಿಂದ ಇದೀಗ ಮಾರ್ಕ್ ವುಡ್ ಕೂಡ ಹೊರಗುಳಿದಿದ್ದಾರೆ. ಇವರ ಬದಲಿ ಆಟಗಾರನಾಗಿ ಇದೀಗ ಲಕ್ನೋ ಫ್ರಾಂಚೈಸಿ ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ ಅವರನ್ನು ಆಯ್ಕೆ ಮಾಡಿಕೊಂಡಿದೆ.
6 / 9
3- ಜೇಸನ್ ರಾಯ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಆರಂಭಿಕನಾಗಿ ಸ್ಥಾನ ಪಡೆದಿದ್ದ ಇಂಗ್ಲೆಂಡ್ ಬ್ಯಾಟರ್ ಜೇಸನ್ ರಾಯ್ ಕೆಕೆಆರ್ ತಂಡಕ್ಕೆ ಕೈಕೊಟ್ಟಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್ನಿಂದ ಹಿಂದೆ ಸರಿದಿರುವ ರಾಯ್ ಬದಲಿಗೆ ಇದೀಗ ಕೆಕೆಆರ್ ಫಿಲ್ ಸಾಲ್ಟ್ ಅವರನ್ನು ಆಯ್ಕೆ ಮಾಡಿದೆ.
7 / 9
4- ಹ್ಯಾರಿ ಬ್ರೂಕ್: ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ಕೋಟಿ ರೂ. ನೀಡಿ ಖರೀದಿಸಿದ್ದ ಇಂಗ್ಲೆಂಡ್ ತಂಡದ ಸ್ಪೋಟಕ ಬ್ಯಾಟರ್ ವೈಯುಕ್ತಿಕ ಕಾರಣ ನೀಡಿ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅವರ ಬದಲಿ ಆಟಗಾರನ ಹುಡುಕಾಟದಲ್ಲಿ ನಿರತವಾಗಿದೆ.
8 / 9
ಇನ್ನು ಕೆಲ ಆಂಗ್ಲ ಆಟಗಾರರು ಅರ್ಧದಲ್ಲೇ ಐಪಿಎಲ್ ತೊರೆಯಲಿದ್ದಾರೆ ಎನ್ನಲಾಗುತ್ತಿದೆ. ಏಕೆಂದರೆ ಮೇ ತಿಂಗಳಲ್ಲಿ ಇಂಗ್ಲೆಂಡ್ ಪಾಕಿಸ್ತಾನ್ ವಿರುದ್ಧ ಟಿ20 ಸರಣಿ ಆಡಬೇಕಿದೆ. ಈ ಸರಣಿಯು ಮೇ 22 ರಂದು ಪ್ರಾರಂಭವಾಗಲಿದ್ದು, 2024ರ T20 ವಿಶ್ವಕಪ್‌ಗೆ ಮುಂಚಿತವಾಗಿ ಇದು ನಿರ್ಣಾಯಕ ಅಭ್ಯಾಸ ಸರಣಿಯಾಗಿದೆ. ಹೀಗಾಗಿ ಇಂಗ್ಲೆಂಡ್ ಆಟಗಾರರು ಅರ್ಧದಲ್ಲೇ ಐಪಿಎಲ್ ತೊರೆಯುವ ಸಾಧ್ಯತೆಯಿದೆ.
9 / 9
ಐಪಿಎಲ್ನಲ್ಲಿರುವ ಇಂಗ್ಲೆಂಡ್ ಆಟಗಾರರು: ಮೊಯೀನ್ ಅಲಿ (ಚೆನ್ನೈ ಸೂಪರ್ ಕಿಂಗ್ಸ್), ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರನ್, ಜಾನಿ ಬೈರ್‌ಸ್ಟೋವ್, ಕ್ರಿಸ್ ವೋಕ್ಸ್ (ಪಂಜಾಬ್ ಕಿಂಗ್ಸ್), ಜೋಸ್ ಬಟ್ಲರ್, ಟಾಮ್ ಕೊಹ್ಲರ್-ಕ್ಯಾಡ್ಮೋರ್ (ರಾಜಸ್ಥಾನ್ ರಾಯಲ್ಸ್), ವಿಲ್ ಜಾಕ್ಸ್, ರೀಸ್ ಟೋಪ್ಲಿ, ಟಾಮ್ ಕರನ್ (ಆರ್ಸಿಬಿ), ಡೇವಿಡ್ ವಿಲ್ಲಿ (ಲಕ್ನೋ ಸೂಪರ್ ಜೈಂಟ್ಸ್).