IPL 2024: ಐಪಿಎಲ್ಗೆ ಸಿಗದ ಗ್ರೀನ್ ಸಿಗ್ನಲ್: NCA ನಲ್ಲೇ ಉಳಿದಿರುವ ಕೆಎಲ್ ರಾಹುಲ್
TV9 Web | Updated By: ಝಾಹಿರ್ ಯೂಸುಫ್
Updated on:
Mar 17, 2024 | 7:52 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಈ ಬಾರಿಯ ಐಪಿಎಲ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ IPL 2024 ಕ್ಕೆ ಚಾಲನೆ ದೊರೆಯಲಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳು ಅಭ್ಯಾಸವನ್ನು ಕೂಡ ಶುರು ಮಾಡಿಕೊಂಡಿದೆ. ಆದರೆ ಈ ಅಭ್ಯಾಸದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ನಾಯಕ ಕೆಎಲ್ ರಾಹುಲ್ (KL Rahul) ಮಾತ್ರ ಕಾಣಿಸಿಕೊಂಡಿಲ್ಲ. ಅಂದರೆ ರಾಹುಲ್ ಇನ್ನೂ ಕೂಡ LSG ತಂಡವನ್ನು ಸೇರಿಕೊಂಡಿಲ್ಲ.
2 / 5
ಬದಲಾಗಿ ಕೆಎಲ್ ರಾಹುಲ್ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲೇ ಉಳಿದಿದ್ದಾರೆ. ಇದಕ್ಕೆ ಕಾರಣ ಫಿಟ್ನೆಸ್ ಟೆಸ್ಟ್. ಅಂದರೆ ಐಪಿಎಲ್ ಆಡುವ ಮುನ್ನ ಗಾಯಗೊಂಡಿರುವ ಟೀಮ್ ಇಂಡಿಯಾ ಆಟಗಾರರು ಎನ್ಸಿಎ ಕಡೆಯಿಂದ ಫಿಟ್ನೆಸ್ ಪ್ರಮಾಣಪತ್ರ ಪಡೆಯಬೇಕೆಂದು ಬಿಸಿಸಿಐ ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದೆ.
3 / 5
ಈ ನಿಯಮದಂತೆ ಈಗಾಗಲೇ ರಿಷಭ್ ಪಂತ್ ಫಿಟ್ನೆಸ್ ಸರ್ಟಿಫಿಕೇಟ್ ಪಡೆದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಆದರೆ ಕೆಎಲ್ ರಾಹುಲ್ ಅವರು ಇನ್ನೂ ಸಹ ಎನ್ಸಿಎನಲ್ಲೇ ಉಳಿದಿದ್ದು, ಕಠಿಣ ತಾಲೀಮಿನಲ್ಲಿ ತೊಡಗಿಸಿಕೊಂಡಿದ್ದಾರೆ.
4 / 5
ಇತ್ತೀಚೆಗೆ ಮುಗಿದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್, ಆ ಬಳಿಕ ತೊಡೆಸಂಧು ನೋವಿನ ಕಾರಣ ಸರಣಿಯಿಂದ ಹಿಂದೆ ಸರಿದಿದ್ದರು. ಹೀಗಾಗಿ ಇದೀಗ ಐಪಿಎಲ್ ಆಡಬೇಕಿದ್ದರೆ ಕೆಎಲ್ಆರ್ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕಿದೆ. ಹೀಗಾಗಿ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿರುವ ರಾಹುಲ್ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
5 / 5
ಅಲ್ಲದೆ ಇನ್ನೆರಡು ದಿನಗಳಲ್ಲಿ ಕೆಎಲ್ ರಾಹುಲ್ ಫಿಟ್ನೆಸ್ ಟೆಸ್ಟ್ಗೆ ಒಳಗಾಗುವ ಸಾಧ್ಯತೆಯಿದ್ದು, ಈ ವೇಳೆ ಸಂಪೂರ್ಣ ಫಿಟ್ ಆಗಿರುವುದು ಸಾಬೀತಾದರೆ ಮಾತ್ರ ಅವರಿಗೆ ಐಪಿಎಲ್ ಆಡಲು ಗ್ರೀನ್ ಸಿಗ್ನಲ್ ಸಿಗಲಿದೆ. ಹೀಗಾಗಿ ಕೆಎಲ್ ರಾಹುಲ್ ಅವರ ಐಪಿಎಲ್ ಭವಿಷ್ಯ ಮುಂದಿನ ಫಿಟ್ನೆಸ್ ಟೆಸ್ಟ್ ಮೇಲೆ ನಿಂತಿದೆ ಎಂದರೆ ತಪ್ಪಾಗಲಾರದು.