IPL 2024: ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಲಕ್ನೋ ಸೂಪರ್ ಜೈಂಟ್ಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಇದುವರೆಗೆ 5 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಪ್ರಸ್ತುತ ಅಂಕ ಪಟ್ಟಿಯಲ್ಲಿ 6 ಪಾಯಿಂಟ್ಸ್​ಗಳೊಂದಿಗೆ 4ನೇ ಸ್ಥಾನ ಅಲಂಕರಿಸಿದೆ. ಇದೀಗ 6ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಕಣಕ್ಕಿಳಿಯಲು ಕೆಎಲ್ ರಾಹುಲ್ ಪಡೆ ಸಜ್ಜಾಗಿ ನಿಂತಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Apr 14, 2024 | 7:31 AM

IPL 2024: ಐಪಿಎಲ್​ನ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

1 / 6
ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಲಕ್ನೋ ತಂಡ ಜೆರ್ಸಿ ಬದಲಿಸಲು ನಿರ್ಧರಿಸಿರುವುದು ವಿಶೇಷ. ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ನಿರ್ಧರಿಸಿದ್ದಾರೆ.

2 / 6
ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

3 / 6
ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

4 / 6
ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ​ಮೋಹನ್ ಬಗಾನ್ ತಂಡದ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರಸ್ತುತ ಇರುವ ಗಾಢ ನೀಲಿ ಜೆರ್ಸಿ ಬದಲಿಗೆ, ಹಸಿರು ಮತ್ತು ಮರೂನ್ ಬಣ್ಣಗಳ ಜೆರ್ಸಿಯಲ್ಲಿ LSG ಈಡನ್ ಗಾರ್ಡನ್ಸ್‌ನಲ್ಲಿ ಕಾಣಿಸಿಕೊಳ್ಳಲಿದೆ.

5 / 6
ಈ ಮೂಲಕ ಕಳೆದ ಬಾರಿಯಂತೆ ಈ ಬಾರಿ ಕೂಡ ಮೋಹನ್ ಬಗಾನ್ ಅಭಿಮಾನಿಗಳನ್ನು ಲಕ್ನೋ ಸೂಪರ್ ಜೈಂಟ್ಸ್​ನತ್ತ ಸೆಳೆಯಲು ಪ್ಲ್ಯಾನ್ ರೂಪಿಸಿದ್ದಾರೆ ಸಂಜೀವ್ ಗೋಯೆಂಕಾ.

6 / 6

Published On - 7:30 am, Sun, 14 April 24

Follow us
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ