IPL 2024: ಅಚಲ ನಂಬಿಕೆ… RCBಗೆ ಧನ್ಯವಾದ ತಿಳಿಸಿದ ನಿಕೋಲಸ್ ಪೂರನ್..!

|

Updated on: May 23, 2024 | 12:10 PM

IPL 2024 RCB vs RR: ಅಹದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 172 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ತಂಡವು 19 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 4 ವಿಕೆಟ್​ಗಳ ಜಯದೊಂದಿಗೆ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

1 / 5
IPL 2024: ಐಪಿಎಲ್​ ಸೀಸನ್ 17 ರಲ್ಲಿ ಕಪ್ ಗೆಲ್ಲುವ ನಿರೀಕ್ಷೆಯಲ್ಲಿದ್ದ RCB ತಂಡದ ಕನಸು ಕಮರಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಸೋಲಿನೊಂದಿಗೆ ಆರ್​ಸಿಬಿ ಐಪಿಎಲ್​ನಿಂದ ಹೊರಬಿದ್ದಿದೆ.

2 / 5
ಈ ಸೋಲಿನ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಚ್ಚೆದೆಯ ಪ್ರದರ್ಶನಕ್ಕೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಉಪನಾಯಕ ನಿಕೋಲಸ್ ಪೂರನ್ ಆರ್​ಸಿಬಿ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.

3 / 5
ಈ ಬಾರಿಯ ಐಪಿಎಲ್​ನ ಮೊದಲ 8 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಗೆದ್ದಿದ್ದು ಕೇವಲ 1 ಮ್ಯಾಚ್​ ಮಾತ್ರ. ಒಂದಾರ್ಥದಲ್ಲಿ ಮೊದಲಾರ್ಧದ ಮುಕ್ತಾಯದ ಬೆನ್ನಲ್ಲೇ ಆರ್​ಸಿಬಿ ತಂಡ ಪ್ಲೇಆಫ್​ನಿಂದ ಹೊರಬೀಳುವುದು ಖಚಿತವಾಗಿತ್ತು. ಆದರೆ ದ್ವಿತೀಯಾರ್ಧದಲ್ಲಿ ಕಂಬ್ಯಾಕ್ ಮಾಡಿದ ಆರ್​ಸಿಬಿ, ಕೊನೆಯ 6 ಪಂದ್ಯಗಳಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿತು. ಅಲ್ಲದೆ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಪ್ಲೇಆಫ್ ಪ್ರವೇಶಿಸಿತ್ತು. ಇಂತಹದೊಂದು ಅದ್ಭುತ ಪ್ರದರ್ಶನ ನೀಡಿದ ಆರ್​ಸಿಬಿ ತಂಡವನ್ನು ಪೂರನ್ ಕೊಂಡಾಡಿದ್ದಾರೆ.

4 / 5
ಒಂದು ಸಣ್ಣ ನಂಬಿಕೆಯು ಏನು ಮಾಡಬಲ್ಲದು ಎಂಬುದನ್ನು ತೋರಿಸಿಕೊಟ್ಟಿದ್ದಕ್ಕಾಗಿ ಆರ್​ಸಿಬಿ ತಂಡಕ್ಕೆ ಧನ್ಯವಾದಗಳು ಎಂದು ನಿಕೋಲಸ್ ಪೂರನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಪ್ಲೇಆಫ್ ಪ್ರವೇಶಿಸಲು ಕೇವಲ 1 ಪರ್ಸೆಂಟ್​ನಷ್ಟು ಮಾತ್ರ ಅವಕಾಶ ಹೊಂದಿದ್ದ ಆರ್​ಸಿಬಿ ತಂಡವು ಯಾವುದು ಕೂಡ ಅಸಾಧ್ಯವಲ್ಲ ಎಂಬುದನ್ನು ತೋರಿಸಿಕೊಟ್ಟಿದೆ. ಇಂತಹ ಅದ್ಭುತ ಪ್ರದರ್ಶನದೊಂದಿಗೆ ಎಲ್ಲರಲ್ಲೂ ಹೊಸ ವಿಶ್ವಾಸ ಮೂಡಿಸಿರುವ ಆರ್​ಸಿಬಿ ತಂಡಕ್ಕೆ ಪೂರನ್ ಧನ್ಯವಾದ ತಿಳಿಸಿರುವುದು ವಿಶೇಷ.

5 / 5
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಉಪನಾಯಕನಾಗಿ ಕಾಣಿಸಿಕೊಂಡಿದ್ದ ನಿಕೋಲಸ್ ಪೂರನ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 14 ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಪೂರನ್ ಮೂರು ಸ್ಪೋಟಕ ಅರ್ಧಶತಕಗಳೊಂದಿಗೆ ಒಟ್ಟು 499 ರನ್ ಬಾರಿಸಿ ಮಿಂಚಿದ್ದರು. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಪ್ಲೇಆಫ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ.

Published On - 12:06 pm, Thu, 23 May 24