AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಕ್ತಾಯದ ಹಂತದತ್ತ ಐಪಿಎಲ್: ಈ ವಾರ 8 ಪಂದ್ಯಗಳು..!

Ipl 2024: ಐಪಿಎಲ್​ನ ಲೀಗ್ ಹಂತದ ಕೊನೆಯ ವಾರದಲ್ಲಿ ಒಟ್ಟು 8 ಪಂದ್ಯಗಳು ನಡೆಯಲಿದೆ. ಈ ಪಂದ್ಯಗಳ ಮೂಲಕ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಹೀಗಾಗಿ ಈ ವಾರ ಜರುಗಲಿರುವ ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಈ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಮುಖಾಮುಖಿಯಾಗಲಿರುವ ತಂಡಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: May 13, 2024 | 2:41 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024)​ ಸೀಸನ್ 17ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 62 ಮ್ಯಾಚ್​ಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 8 ಪಂದ್ಯಗಳು ಮಾತ್ರ. ಈ ಎಂಟು ಪಂದ್ಯಗಳ ನಡುವಣ ಮುಖಾಮುಖಿಯಲ್ಲಿ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ.

1 / 10
ಹೀಗಾಗಿ ಈ ವಾರದ ಪಂದ್ಯಗಳಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅದರಂತೆ ಲೀಗ್ ಹಂತದ ಕೊನೆಯ 8 ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

2 / 10
ಗುಜರಾತ್ ಟೈಟಾನ್ಸ್ vs ಕೊಲ್ಕತ್ತಾ ನೈಟ್ ರೈಡರ್ಸ್​: ಮೇ 13 ರಂದು (ಸೋಮವಾರ) ನಡೆಯಲಿರುವ ಐಪಿಎಲ್​ನ 63ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

3 / 10
ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್: ಮಂಗಳವಾರ (ಮೇ 14) ನಡೆಯಲಿರುವ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್. ಈ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

4 / 10
ರಾಜಸ್ಥಾನ್ ರಾಯಲ್ಸ್​ vs ಪಂಜಾಬ್ ಕಿಂಗ್ಸ್​: ಮೇ 15 ರಂದು (ಬುಧವಾರ) ನಡೆಯಲಿರುವ ಐಪಿಎಲ್​ನ 65ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿದೆ.

5 / 10
ಸನ್​ರೈಸರ್ಸ್​ ಹೈದರಾಬಾದ್ vs ಗುಜರಾತ್ ಟೈಟಾನ್ಸ್​: ಗುರುವಾರ (ಮೇ 16) ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್​ ತಂಡಗಳು ಮುಖಾಮುಖಿಯಾಗಲಿದೆ.

6 / 10
ಮುಂಬೈ ಇಂಡಿಯನ್ಸ್ vs ಲಕ್ನೋ ಸೂಪರ್ ಜೈಂಟ್ಸ್: ಮೇ 17 ರಂದು (ಶುಕ್ರವಾರ) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್​.

7 / 10
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್​: ಶನಿವಾರ (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.

8 / 10
ಸನ್​ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್: ಮೇ 19 ರಂದು (ಭಾನುವಾರ) ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ 69ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದಾರಾಬಾದ್ ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಧ್ಯಾಹ್ನ 3.30 ರಿಂದ ಶುರುವಾಗಲಿದೆ.

9 / 10
ರಾಜಸ್ಥಾನ್ ರಾಯಲ್ಸ್ vs ಕೊಲ್ಕತ್ತಾ ನೈಟ್ ರೈಡರ್ಸ್: ಭಾನುವಾರ (ಮೇ 19) ನಡೆಯಲಿರುವ 2ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದೊಂದಿಗೆ ಐಪಿಎಲ್ ಸೀಸನ್ 17ರ ಲೀಗ್ ಹಂತದ ಪಂದ್ಯಗಳು ಪೂರ್ಣಗೊಳ್ಳಲಿದೆ.

10 / 10