IPL 2024: CSK ತಂಡದ ಆರಂಭಿಕ ಪಂದ್ಯಗಳಿಗೆ ಪ್ರಮುಖ ವೇಗಿ ಅಲಭ್ಯ
TV9 Web | Updated By: ಝಾಹಿರ್ ಯೂಸುಫ್
Updated on:
Mar 16, 2024 | 2:06 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಹೊಸ ಚಿಂತೆ ಶುರುವಾಗಿದೆ. ತಂಡದ ಪ್ರಮುಖ ವೇಗದ ಬೌಲರ್ ಈ ಬಾರಿಯ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಮತ್ತೊಂದೆಡೆ ಸಿಎಸ್ಕೆ ತಂಡದ ಆರಂಭಿಕ ಆಟಗಾರ ಕೂಡ ಮೊದಲಾರ್ಧದ ಪಂದ್ಯಗಳಿಗೆ ಗೈರಾಗಲಿದ್ದಾರೆ.
1 / 7
ಐಪಿಎಲ್ (IPL 2024) ಆರಂಭಕ್ಕೂ ಮುನ್ನವೇ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಒಂದರ ಮೇಲೆ ಒಂದರಂತೆ ಆಘಾತಗಳು ಎದುರಾಗುತ್ತಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸಿಎಸ್ಕೆ ತಂಡದ ಪ್ರಮುಖ ವೇಗಿ ಮಥೀಶ ಪತಿರಾಣ ಗಾಯಗೊಂಡಿದ್ದಾರೆ.
2 / 7
ಗಾಯದ ಹಿನ್ನಲೆ ಪತಿರಾಣ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಐಪಿಎಲ್ ಆರಂಭದ ವೇಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಸಿಎಸ್ಕೆ ತಂಡದ ಆರಂಭಿಕ ಕೆಲ ಪಂದ್ಯಗಳಿಗೆ ಮಥೀಶ ಪತಿರಾಣ ಅಲಭ್ಯರಾಗುವುದು ಖಚಿತ.
3 / 7
ಇದಕ್ಕೂ ಮುನ್ನ ಸಿಎಸ್ಕೆ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ ಗಾಯಗೊಂಡಿದ್ದರು. ಎಡಗೈ ಹೆಬ್ಬೆರಳಿಗೆ ಗಾಯವಾಗಿರುವ ಕಾರಣ ಅವರು ಮೇ ತಿಂಗಳ ತನಕ ಮೈದಾನಕ್ಕಿಳಿಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಈ ಬಾರಿಯ ಐಪಿಎಲ್ನ ಮೊದಲಾರ್ಧದ ಪಂದ್ಯಗಳಿಗೆ ಕಾನ್ವೆ ಅಲಭ್ಯರಾಗಲಿದ್ದಾರೆ.
4 / 7
ಇದೀಗ ಸಿಎಸ್ಕೆ ತಂಡದ ಪ್ರಮುಖ ವೇಗಿಯಾಗಿರುವ ಮಥೀಶ ಪತಿರಾಣ ಕೂಡ ಗಾಯಕ್ಕೆ ತುತ್ತಾಗಿದ್ದು, ಅವರು ಕೂಡ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
5 / 7
6 / 7
ಈ ಬಾರಿ ಐಪಿಎಲ್ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.
7 / 7
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.
Published On - 2:03 pm, Sat, 16 March 24