IPL 2024: ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದ RCB

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 19ನೇ ಪಂದ್ಯದಲ್ಲಿ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟೀಮ್ ಇಂಡಿಯಾದ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಮುರಿದಿದೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 07, 2024 | 12:09 PM

ಇಂಡಿಯನ್ ಪ್ರೀಮಿಯರ್ ಲೀಗ್​ (IPL) ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದಿದೆ. ಅಚ್ಚರಿ ಎನಿಸಿದರೂ ಇದು ಸತ್ಯ. ಅದು ಕೂಡ ವಿರಾಟ್ ಕೊಹ್ಲಿಯ 8ನೇ ಶತಕದೊಂದಿಗೆ ಎಂಬುದು ವಿಶೇಷ.

1 / 5
ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ತಂಡವೆಂಬ ವಿಶ್ವ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು. ಭಾರತ ತಂಡವು ಒಟ್ಟು 219 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಭಾರತೀಯ ಬ್ಯಾಟರ್​ಗಳು 17 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿ ತಂಡವೆಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿತ್ತು.

2 / 5
ಆದರೀಗ ಈ ವಿಶ್ವ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುರಿದಿದೆ. ಟಿ20 ಕ್ರಿಕೆಟ್​ನಲ್ಲಿ 246 ಪಂದ್ಯಗಳನ್ನಾಡಿರುವ ಆರ್​ಸಿಬಿ ಪರ 18 ಶತಕಗಳು ಮೂಡಿಬಂದಿವೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ತಂಡ ಎಂಬ ದಾಖಲೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

3 / 5
ವಿಶೇಷ ಎಂದರೆ ಆರ್​ಸಿಬಿ ಪರ ಮೂಡಿಬಂದಿರುವ 18 ಶತಕಗಳಲ್ಲಿ 8 ಸೆಂಚುರಿಗಳನ್ನು ವಿರಾಟ್ ಕೊಹ್ಲಿ ಒಬ್ಬರೇ ಬಾರಿಸಿದ್ದಾರೆ. ಇನ್ನುಳಿದಂತೆ ಮನೀಶ್ ಪಾಂಡೆ (1), ಕ್ರಿಸ್ ಗೇಲ್ (5), ಎಬಿ ಡಿವಿಲಿಯರ್ಸ್ (2), ದೇವದತ್ ಪಡಿಕ್ಕಲ್ (1), ರಜತ್ ಪಾಟಿದಾರ್ (1) ಆರ್​ಸಿಬಿ ಪರ ಸೆಂಚುರಿಗಳನ್ನು ಸಿಡಿಸಿ ಮಿಂಚಿದ್ದಾರೆ.

4 / 5
ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಶತಕಗಳನ್ನು ಶತಕ ಸಿಡಿಸಿದ ತಂಡಗಳ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (18) ಅಗ್ರಸ್ಥಾನದಲ್ಲಿದ್ದರೆ, ದ್ವಿತೀಯ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ (14) ತಂಡವಿದೆ. ಹಾಗೆಯೇ ತೃತೀಯ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ (14) ತಂಡ ಕಾಣಿಸಿಕೊಂಡಿದೆ.

5 / 5
Follow us
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ