IPL 2024: ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದ RCB
TV9 Web | Updated By: ಝಾಹಿರ್ ಯೂಸುಫ್
Updated on:
Apr 07, 2024 | 12:09 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 19ನೇ ಪಂದ್ಯದಲ್ಲಿ ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟೀಮ್ ಇಂಡಿಯಾದ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಮುರಿದಿದೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದಿದೆ. ಅಚ್ಚರಿ ಎನಿಸಿದರೂ ಇದು ಸತ್ಯ. ಅದು ಕೂಡ ವಿರಾಟ್ ಕೊಹ್ಲಿಯ 8ನೇ ಶತಕದೊಂದಿಗೆ ಎಂಬುದು ವಿಶೇಷ.
2 / 5
ಅಂದರೆ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ತಂಡವೆಂಬ ವಿಶ್ವ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು. ಭಾರತ ತಂಡವು ಒಟ್ಟು 219 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಭಾರತೀಯ ಬ್ಯಾಟರ್ಗಳು 17 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿ ತಂಡವೆಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿತ್ತು.
3 / 5
ಆದರೀಗ ಈ ವಿಶ್ವ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುರಿದಿದೆ. ಟಿ20 ಕ್ರಿಕೆಟ್ನಲ್ಲಿ 246 ಪಂದ್ಯಗಳನ್ನಾಡಿರುವ ಆರ್ಸಿಬಿ ಪರ 18 ಶತಕಗಳು ಮೂಡಿಬಂದಿವೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ತಂಡ ಎಂಬ ದಾಖಲೆಯನ್ನು ಆರ್ಸಿಬಿ ತನ್ನದಾಗಿಸಿಕೊಂಡಿದೆ.
4 / 5
ವಿಶೇಷ ಎಂದರೆ ಆರ್ಸಿಬಿ ಪರ ಮೂಡಿಬಂದಿರುವ 18 ಶತಕಗಳಲ್ಲಿ 8 ಸೆಂಚುರಿಗಳನ್ನು ವಿರಾಟ್ ಕೊಹ್ಲಿ ಒಬ್ಬರೇ ಬಾರಿಸಿದ್ದಾರೆ. ಇನ್ನುಳಿದಂತೆ ಮನೀಶ್ ಪಾಂಡೆ (1), ಕ್ರಿಸ್ ಗೇಲ್ (5), ಎಬಿ ಡಿವಿಲಿಯರ್ಸ್ (2), ದೇವದತ್ ಪಡಿಕ್ಕಲ್ (1), ರಜತ್ ಪಾಟಿದಾರ್ (1) ಆರ್ಸಿಬಿ ಪರ ಸೆಂಚುರಿಗಳನ್ನು ಸಿಡಿಸಿ ಮಿಂಚಿದ್ದಾರೆ.
5 / 5
ಇನ್ನು ಐಪಿಎಲ್ನಲ್ಲಿ ಅತೀ ಹೆಚ್ಚು ಶತಕಗಳನ್ನು ಶತಕ ಸಿಡಿಸಿದ ತಂಡಗಳ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (18) ಅಗ್ರಸ್ಥಾನದಲ್ಲಿದ್ದರೆ, ದ್ವಿತೀಯ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ (14) ತಂಡವಿದೆ. ಹಾಗೆಯೇ ತೃತೀಯ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ (14) ತಂಡ ಕಾಣಿಸಿಕೊಂಡಿದೆ.