ಇದೀಗ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಆ್ಯಂಡ್ರೆ ರಸೆಲ್ ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಡೆತ್ ಓವರ್ಗಳಲ್ಲಿ 206.31 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟಿಂಗ್ ಮಾಡಿರುವ ರಸೆಲ್ ಇದುವರೆಗೆ ಒಟ್ಟು 1013 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ನ ಕೊನೆಯ 4 ಓವರ್ಗಳಲ್ಲಿ 200+ ಸ್ಟ್ರೈಕ್ ರೇಟ್ನಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.