IPL 2024: ಸಿಕ್ಸ್ನಲ್ಲಿ ಕ್ಲಾಸೆನ್, ಫೋರ್ನಲ್ಲಿ ಕಿಂಗ್ ಕೊಹ್ಲಿ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಬ್ಯಾಟರ್ಗಳ ಅಬ್ಬರ ಜೋರಾಗಿಯೇ ಇದೆ. ಈಗಾಗಲೇ ಸಿಕ್ಸ್ಗಳ ಸಂಖ್ಯೆಯು 300ರ ಗಡಿದಾಟಿದೆ. ಹಾಗೆಯೇ ಫೋರ್ ಬಾರಿಸುವಲ್ಲಿಯೂ ಬ್ಯಾಟ್ಸ್ಮನ್ಗಳು ಹಿಂದೆ ಬಿದ್ದಿಲ್ಲ. ಹೀಗಾಗಿಯೇ ಈ ವರ್ಷ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಬೌಂಡರಿಗಳ ದಾಖಲೆ ನಿರ್ಮಾಣವಾಗುವ ಸಾಧ್ಯತೆಯಿದೆ.
Updated on: Apr 06, 2024 | 12:54 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 18 ಪಂದ್ಯಗಳ ಮುಕ್ತಾಯದ ವೇಳೆಗೆ 300 ಕ್ಕಿಂತ ಅಧಿಕ ಸಿಕ್ಸ್ಗಳು ಮೂಡಿಬಂದಿವೆ. ಇದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿರುವುದು ಸನ್ರೈಸರ್ಸ್ ಹೈದರಾಬಾದ್ ತಂಡದ ಸ್ಪೋಟಕ ಬ್ಯಾಟರ್ ಹೆನ್ರಿಕ್ ಕ್ಲಾಸೆನ್.

ಹಾಗೆಯೇ ಫೋರ್ಗಳ ಲೆಕ್ಕಾಚಾರದಲ್ಲಿ ಅಗ್ರಸ್ಥಾನದಲ್ಲಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಎಂಬುದು ವಿಶೇಷ. ಹಾಗಿದ್ರೆ 18 ಪಂದ್ಯಗಳ ಮುಕ್ತಾಯದ ವೇಳೆಗೆ ಅತ್ಯಧಿಕ ಬೌಂಡರಿ ಬಾರಿಸಿದ ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...

1- ಹೆನ್ರಿಕ್ ಕ್ಲಾಸೆನ್: ಸನ್ರೈಸರ್ಸ್ ಹೈದರಾಬಾದ್ ತಂಡದ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಹೆನ್ರಿಕ್ ಕ್ಲಾಸೆನ್ ಇದುವರೆಗೆ 4 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 17 ಸಿಕ್ಸ್ಗಳನ್ನು ಸಿಡಿಸಿ ಪ್ರಸ್ತುತ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

2- ಅಭಿಷೇಕ್ ಶರ್ಮಾ: ಸನ್ರೈಸರ್ಸ್ ಹೈದರಾಬಾದ್ ತಂಡದ ಯುವ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ 4 ಇನಿಂಗ್ಸ್ಗಳಿಂದ ಒಟ್ಟು 15 ಸಿಕ್ಸರ್ಗಳನ್ನು ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

1- ವಿರಾಟ್ ಕೊಹ್ಲಿ: ಈ ಬಾರಿಯ ಐಪಿಎಲ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ ಇದುವರೆಗೆ 4 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 17 ಫೋರ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಅತ್ಯಧಿಕ ಫೋರ್ಗಳನ್ನು ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

2- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಇದುವರೆಗೆ 4 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದು, ಈ ವೇಳೆ ಒಟ್ಟು 16 ಫೋರ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

TV9 Kannada
Read More



