AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಸಿಕ್ಸ್ ಸಿಡಿಸಿಯೇ ದಾಖಲೆ ಬರೆದ ಧೋನಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಇದುವರೆಗೆ ಮೂರು ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆರ್​ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದ್ದ ಸಿಎಸ್​ಕೆ ಆ ಬಳಿಕ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದು ಬೀಗಿತ್ತು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 20 ರನ್​ಗಳಿಂದ ಸೋಲನುಭವಿಸಿದೆ.

TV9 Web
| Edited By: |

Updated on: Apr 01, 2024 | 10:52 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲೇ ಕೊನೆಯ ಎರಡು ಓವರ್​ಗಳಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ  ದಾಖಲೆಯೊಂದು ಮಹೇಂದ್ರ ಸಿಂಗ್ ಧೋನಿಯ (MS Dhoni) ಹೆಸರಿನಲ್ಲಿದೆ. ಈ ದಾಖಲೆಯ ಜೊತೆಗೆ ಇದೀಗ ಧೋನಿ ವಿಶೇಷ ಮೈಲ್ಲುಗಲ್ಲನ್ನು ಮುಟ್ಟಿದ್ದಾರೆ.

1 / 5
ವಿಶಾಖಪಟ್ಟಣಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 16 ಎಸೆತಗಳನ್ನು ಎದುರಿಸಿದ ಧೋನಿ 4 ಫೋರ್ ಹಾಗೂ 3 ಸಿಕ್ಸ್​ಗಳೊಂದಿಗೆ ಅಜೇಯ 37 ರನ್ ಬಾರಿಸಿದ್ದರು. ಈ ಮೂರು ಸಿಕ್ಸ್​ಗಳೊಂದಿಗೆ ಧೋನಿ ಐಪಿಎಲ್​ನ ಕೊನೆಯ ಎರಡು ಓವರ್​ಗಳಲ್ಲಿ ಒಟ್ಟು 100 ಸಿಕ್ಸ್​ಗಳನ್ನು ಬಾರಿಸಿದ ವಿಶೇಷ ದಾಖಲೆ ಬರೆದಿದ್ದಾರೆ.

2 / 5
ಅಂದರೆ ಐಪಿಎಲ್​ನ ಪಂದ್ಯದ 19ನೇ ಮತ್ತು 20ನೇ ಓವರ್​ಗಳಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸುವ ಮೂಲಕ ಧೋನಿ 100 ಸಿಕ್ಸ್​ಗಳ ಸಾಧನೆ ಮಾಡಿದ್ದಾರೆ. ಧೊನಿಯನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ 19 ಮತ್ತು 20ನೇ ಓವರ್​ಗಳ ಮೂಲಕ 75 ಸಿಕ್ಸ್​​ಗಳನ್ನು ಕೂಡ ಬಾರಿಸಿಲ್ಲ ಎಂಬುದು ವಿಶೇಷ.

3 / 5
ಹಾಗೆಯೇ 20ನೇ ಓವರ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ಕೂಡ ಧೋನಿ ಹೆಸರಿನಲ್ಲಿದೆ. ಮಹೇಂದ್ರ ಸಿಂಗ್ ಧೋನಿ ಇನಿಂಗ್ಸ್​ನ ಕೊನೆಯ ಓವರ್​ನಲ್ಲಿ ಒಟ್ಟು 61 ಸಿಕ್ಸ್​ ಬಾರಿಸುವ ಮೂಲಕ ಈ ದಾಖಲೆಯನ್ನು ಬರೆದಿದ್ದಾರೆ.

4 / 5
ಒಟ್ಟಿನಲ್ಲಿ 42ನೇ ವಯಸ್ಸಿನಲ್ಲೂ ಮಹೇಂದ್ರ ಸಿಂಗ್ ಧೋನಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದು, ನಿವೃತ್ತಿಗೂ ಮುನ್ನ ಈ ದಾಖಲೆ ಪಟ್ಟಿ ಮತ್ತಷ್ಟು ಬೆಳೆಯುವ ನಿರೀಕ್ಷೆಯಿದೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು