IPL 2024: ಸಿಕ್ಸ್ ಹಿಟ್ಟರ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಪೂರನ್
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟ್ಸ್ಮನ್ಗಳ ಟಾಪ್-3 ಪಟ್ಟಿಯಲ್ಲಿ ಏಕೈಕ ಭಾರತೀಯ ಬ್ಯಾಟರ್ ಸ್ಥಾನ ಪಡೆದಿದ್ದಾರೆ. ಇನ್ನು ಆರ್ಸಿಬಿ ಪರ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ಗಳಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ ಕಳೆದ 6 ಇನಿಂಗ್ಸ್ಗಳಲ್ಲಿ ಒಟ್ಟು 12 ಸಿಕ್ಸ್ಗಳನ್ನು ಬಾರಿಸಿದ್ದಾರೆ.
Updated on:Apr 15, 2024 | 10:33 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ನಿಕೋಲಸ್ ಪೂರನ್ ಅಬ್ಬರ ಮುಂದುವರೆದಿದೆ. ಲಕ್ನೋ ಸೂಪರ್ ಜೈಂಟ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ಪೂರನ್ ಇದೀಗ ಸಿಕ್ಸ್ ಹಿಟ್ಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ 32 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 45 ರನ್ ಬಾರಿಸಿದರು. ಈ ನಾಲ್ಕು ಸಿಕ್ಸ್ಗಳೊಂದಿಗೆ ಈ ಬಾರಿಯ ಐಪಿಎಲ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು. ಹಾಗಿದ್ರೆ ಈ ಬಾರಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟ್ಸ್ಮನ್ಗಳು ಯಾರೆಲ್ಲಾ ಎಂದು ನೋಡೋಣ...

1- ನಿಕೋಲಸ್ ಪೂರನ್: ಐಪಿಎಲ್ 2024 ರಲ್ಲಿ ಈವರೆಗೆ 6 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಪೂರನ್ ಒಟ್ಟು 138 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 19 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳನ್ನು ಸಿಡಿಸಿದ್ದಾರೆ.

2- ರಿಯಾನ್ ಪರಾಗ್: ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿರುವ ರಿಯಾನ್ ಪರಾಗ್ 6 ಪಂದ್ಯಗಳಲ್ಲಿ 183 ಎಸೆತಗಳನ್ನು ಎದುರಿಸಿದ್ದು, ಈ ವೇಳೆ ಬರೋಬ್ಬರಿ 18 ಸಿಕ್ಸ್ಗಳನ್ನು ಬಾರಿಸಿದ್ದಾರೆ.

3- ಹೆನ್ರಿಕ್ ಕ್ಲಾಸೆನ್: ಈ ಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿರುವುದು ಹೆನ್ರಿಕ್ ಕ್ಲಾಸೆನ್. ಸನ್ರೈಸರ್ಸ್ ಹೈದರಾಬಾದ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ಕ್ಲಾಸೆನ್ 5 ಪಂದ್ಯಗಳಲ್ಲಿ 96 ಎಸೆತಗಳನ್ನು ಎದುರಿಸಿದ್ದು, ಈ ವೇಳೆ 17 ಸಿಕ್ಸ್ಗಳನ್ನು ಬಾರಿಸಿ ಮಿಂಚಿದ್ದಾರೆ.

4- ಅಭಿಷೇಕ್ ಶರ್ಮಾ: ಸನ್ರೈಸರ್ಸ್ ಹೈದರಾಬಾದ್ ತಂಡದ ಯುವ ದಾಂಡಿಗ ಅಭಿಷೇಕ್ ಶರ್ಮಾ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಐದು ಪಂದ್ಯಗಳಲ್ಲಿ 85 ಎಸೆತಗಳನ್ನು ಎದುರಿಸಿರುವ ಅಭಿ ಇದುವರೆಗೆ 16 ಸಿಕ್ಸ್ಗಳನ್ನು ಬಾರಿಸಿದ್ದಾರೆ.
Published On - 10:32 am, Mon, 15 April 24



















