AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡದ ಕಳಪೆ ದಾಖಲೆ ಸರಿಗಟ್ಟಿದ DC

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 100 ಕ್ಕಿಂತ ಅಧಿಕ ರನ್​ಗಳ ಅಂತರದಿಂದ ಸೋತ ತಂಡಗಳ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಅಗ್ರಸ್ಥಾನದಲ್ಲಿದೆ. 2008 ರಲ್ಲಿ ಕೆಕೆಆರ್ ವಿರುದ್ಧ ಹೀನಾಯ ಸೋಲನುಭವಿಸಿ ಐಪಿಎಲ್ ಅಭಿಮಾನ ಆರಂಭಿಸಿದ್ದ ಆರ್​ಸಿಬಿ ತಂಡದ ಈ ಕಳಪೆ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಸರಿಗಟ್ಟಿದೆ.

TV9 Web
| Edited By: |

Updated on: Apr 04, 2024 | 10:34 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಮೂರು ತಂಡಗಳು ಸತತ ಸೋಲುಗಳಿಂದ ಕಂಗೆಟ್ಟಿದೆ. ಈ ಪಟ್ಟಿಯಲ್ಲಿ ಮೂರು ಪಂದ್ಯಗಳಲ್ಲಿ ಮೂರು ಸೊಲು ಕಂಡಿರುವ ಮುಂಬೈ ಇಂಡಿಯನ್ಸ್ ಅಗ್ರಸ್ಥಾನದಲ್ಲಿದ್ದರೆ, 4 ಮ್ಯಾಚ್​ಗಳಲ್ಲಿ ತಲಾ 3 ಸೋಲುಗಳನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ನಂತರದ ಸ್ಥಾನಗಳಲ್ಲಿದೆ.

1 / 6
ವಿಶೇಷ ಎಂದರೆ ಇದೀಗ ಮೂರನೇ ಸೋಲಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿದ್ದ ಅನಗತ್ಯ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಅದು ಸಹ 106 ರನ್​ಗಳ ಪರಾಜಯದೊಂದಿಗೆ ಎಂಬುದು ವಿಶೇಷ.

2 / 6
ಹೌದು, ಐಪಿಎಲ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 100+ ರನ್​ಗಳ ಅಂತರದಿಂದ ಸೋತ ಹೀನಾಯ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿದೆ. ಆರ್​ಸಿಬಿ 2008 ರಲ್ಲಿ ಕೆಕೆಆರ್ ವಿರುದ್ಧ 140 ರನ್​ಗಳ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿತ್ತು.

3 / 6
ಇದಾದ ಬಳಿಕ 2011 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 111 ರನ್​ಗಳ ಅಂತರದಿಂದ ಆರ್​ಸಿಬಿ ಮುಗ್ಗರಿಸಿತ್ತು. ಆನಂತರ 2019 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 118 ರನ್​ಗಳ ಸೋಲುಂಡಿತ್ತು. ಈ ಮೂಲಕ ಮೂರು ಬಾರಿ 100 ಕ್ಕಿಂತ ಹೆಚ್ಚಿನ ರನ್​ಗಳ ಅಂತರದಿಂದ ಸೋತ ತಂಡವೆಂಬ ಹಣೆಪಟ್ಟಿಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿತ್ತು.

4 / 6
ಇದೀಗ ಈ ಕಳಪೆ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸರಿಗಟ್ಟಿದೆ. 2008 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 105 ರನ್​ಗಳಿಂದ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್, 2017 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 146 ರನ್​ಗಳ ಅಂತರದಿಂದ ಮಕಾಡೆ ಮಲಗಿತ್ತು. ಇದೀಗ ಕೆಕೆಆರ್ ವಿರುದ್ಧ 106 ರನ್​ಗಳಿಂದ ಸೋಲನುಭವಿಸಿದೆ.

5 / 6
ಈ ಹೀನಾಯ ಸೋಲಿನೊಂದಿಗೆ ಆರ್​ಸಿಬಿ ಹೆಸರಿನಲ್ಲಿದ್ದ ಅತೀ ಹೆಚ್ಚು ಬಾರಿ 100+ ರನ್​ಗಳ ಪರಾಜಯದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸರಿಗಟ್ಟಿದೆ. ಅಂದಹಾಗೆ ಐಪಿಎಲ್​ ಇತಿಹಾಸ ಅತ್ಯಂತ ಹೀನಾಯ ಸೋಲಿನ ದಾಖಲೆ ಕೂಡ ಡೆಲ್ಲಿ ತಂಡದ ಹೆಸರಿನಲ್ಲಿಯೇ ಇದೆ. 2017 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 146 ರನ್​ಗಳ ಅಂತರದಿಂದ ಸೋತು ಡೆಲ್ಲಿ ಕ್ಯಾಪಿಟಲ್ಸ್ ಈ ಅನಗತ್ಯ ದಾಖಲೆ ಬರೆದಿದೆ.

6 / 6
Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ

ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು

ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ

ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ

ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ

ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್

ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು

ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ

ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್