Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕಿಂಗ್ ಕೊಹ್ಲಿಯ ವಿಶೇಷ ದಾಖಲೆ ಸರಿಗಟ್ಟಿದ ಎಂಎಸ್ ಧೋನಿ

IPL 2024: ಐಪಿಎಲ್ 2024ರ 29ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮಹೇಂದ್ರ ಸಿಂಗ್ ಧೋನಿ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ 2ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 15, 2024 | 9:18 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 29ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮಹೇಂದ್ರ ಸಿಂಗ್ ಧೋನಿ (MS Dhoni) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಪರ 250 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದರು. ಈ ಮೂಲಕ ಐಪಿಎಲ್ ಫ್ರಾಂಚೈಸಿಯೊಂದರ ಪರ 250 ಪಂದ್ಯಗಳನ್ನಾಡಿದ 2ನೇ ಆಟಗಾರ ಎನಿಸಿಕೊಂಡರು.

2 / 5
ಇದಕ್ಕೂ ಮುನ್ನ ಇಂತಹದೊಂದು ದಾಖಲೆ ನಿರ್ಮಿಸಿದ್ದು ವಿರಾಟ್ ಕೊಹ್ಲಿ. ಆರ್​ಸಿಬಿ ಪರ ಇದುವರೆಗೆ 258 ಪಂದ್ಯಗಳನ್ನಾಡುವ ಮೂಲಕ ಕಿಂಗ್ ಕೊಹ್ಲಿ ಐಪಿಎಲ್​ ತಂಡವೊಂದರ ಪರ ಅತೀ ಹೆಚ್ಚು ಮ್ಯಾಚ್​ಗಳನ್ನಾಡಿದ ವಿಶೇಷ ದಾಖಲೆ ಬರೆದಿದ್ದಾರೆ.

3 / 5
ಇದೀಗ ಸಿಎಸ್​ಕೆ ಪರ 250 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಈ ಸಾಧನೆ ಮಾಡಿದ 2ನೇ ಆಟಗಾರನಾಗಿ ಮಹೇಂದ್ರ ಸಿಂಗ್ ಧೋನಿ ಹೊರಹೊಮ್ಮಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸಿಎಸ್​ಕೆ ತಂಡದ ಮಾಜಿ ನಾಯಕ ಸರಿಟ್ಟಿದ್ದಾರೆ.

4 / 5
ಇನ್ನು 250ನೇ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಕೊನೆಯ ಓವರ್​ನ 4 ಎಸೆತಗಳನ್ನು ಎದುರಿಸಿದ ಎಂಎಸ್​ಡಿ 3 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 20 ರನ್ ಚಚ್ಚಿದರು. ಈ ಭರ್ಜರಿ ಬ್ಯಾಟಿಂಗ್ ಪರಿಣಾಮ ಸಿಎಸ್​ಕೆ ತಂಡವು 20 ಓವರ್​ 4 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 186 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸಿಎಸ್​ಕೆ ತಂಡವು 20 ರನ್​ಗಳ ಜಯ ಸಾಧಿಸಿದೆ.

5 / 5
Follow us
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು

VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್

ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?

ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ

ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ