ಇಲ್ಲಿ ಹಾರ್ದಿಕ್ ಪಾಂಡ್ಯ ಜೊತೆ ಗುರುತಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ಇಶಾನ್ ಕಿಶನ್, ಕೋಚ್ ಕೀರನ್ ಪೊಲಾರ್ಡ್ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿದೆ. ಹಾಗೆಯೇ ರೋಹಿತ್ ಶರ್ಮಾ ಜೊತೆ ಜಸ್ಪ್ರೀತ್ ಬುಮ್ರಾ, ತಿಲಕ್ ವರ್ಮಾ ಸೇರಿದಂತೆ ಒಂದಷ್ಟು ಆಟಗಾರರಿದ್ದಾರೆ ಎಂದು ಪ್ರಮುಖ ಹಿಂದಿ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಬಹಿರಂಗವಾಗಿದೆ.