IPL 2024: ಮುಂಬೈ ಇಂಡಿಯನ್ಸ್ ಪ್ಲೇಆಫ್ ಚಾನ್ಸ್​ 0.0006%

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 11 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್​ಗಳಲ್ಲಿ ಮಾತ್ರ. ಈ ಮೂರು ಗೆಲುವುಗಳೊಂದಿಗೆ ಒಟ್ಟು 6 ಅಂಕಗಳನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 04, 2024 | 8:30 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಮುಂಬೈ ಇಂಡಿಯನ್ಸ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಈವರೆಗೆ ಆಡಿದ 11 ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಪಡೆ ಗೆದ್ದಿರುವುದು ಕೇವಲ 3 ಮ್ಯಾಚ್​ಗಳಲ್ಲಿ ಮಾತ್ರ. ಅಂದರೆ 8 ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ಇದೀಗ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

1 / 5
ಇನ್ನು ಮುಂಬೈ ಇಂಡಿಯನ್ಸ್ ತಂಡಕ್ಕೆ ಉಳಿದಿರುವುದು ಕೇವಲ 3 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮುಂಬೈ ತಂಡದ ಒಟ್ಟು ಪಾಯಿಂಟ್ಸ್​ 12 ಆಗಲಿದೆ. ಇದಾಗ್ಯೂ ಹಾರ್ದಿಕ್ ಪಾಂಡ್ಯ ಪಡೆಗೆ ಪ್ಲೇಆಫ್ ಪ್ರವೇಶಿಸಲು ಅವಕಾಶವಿದೆಯಾ ಎಂದು ಕೇಳಿದ್ರೆ, ಉತ್ತರ- 0.0006%

2 / 5
ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲು ಕೇವಲ 0.0006% ಸಾಧ್ಯತೆಗಳಿವೆ. ಅಂದರೆ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡವು 12 ಅಂಕಗಳಲ್ಲೇ ಉಳಿದರೆ ಮಾತ್ರ ಉತ್ತಮ ನೆಟ್​ ರನ್ ರೇಟ್​ನೊಂದೊಗೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಬಹುದು.

3 / 5
ಆದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ 16 ಅಂಕಗಳನ್ನು ಕಲೆಹಾಕಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ 14 ಅಂಕಗಳನ್ನು ಪಡೆದುಕೊಂಡಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ತಲಾ 12 ಅಂಕಗಳನ್ನು ಹೊಂದಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್ ಕನಸು ಬಹುತೇಕ ಅಂತ್ಯ ಎಂದೇ ಹೇಳಬಹುದು.

4 / 5
ಮುಂಬೈ ಇಂಡಿಯನ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಈ ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ ಮುಂಬೈ ಇಂಡಿಯನ್ಸ್ ತಂಡವು ಅಧಿಕೃತವಾಗಿ ಐಪಿಎಲ್ ಪ್ಲೇಆಫ್ ರೇಸ್​​ನಿಂದ ಹೊರಬೀಳಲಿದೆ.

5 / 5
Follow us
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್