IPL 2024: ಮುಂಬೈ ಇಂಡಿಯನ್ಸ್ ಪ್ಲೇಆಫ್ ಚಾನ್ಸ್ 0.0006%
TV9 Web | Updated By: ಝಾಹಿರ್ ಯೂಸುಫ್
Updated on:
May 04, 2024 | 8:30 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 11 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ಗಳಲ್ಲಿ ಮಾತ್ರ. ಈ ಮೂರು ಗೆಲುವುಗಳೊಂದಿಗೆ ಒಟ್ಟು 6 ಅಂಕಗಳನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ 9ನೇ ಸ್ಥಾನದಲ್ಲಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2024) ಮುಂಬೈ ಇಂಡಿಯನ್ಸ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಈವರೆಗೆ ಆಡಿದ 11 ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಪಡೆ ಗೆದ್ದಿರುವುದು ಕೇವಲ 3 ಮ್ಯಾಚ್ಗಳಲ್ಲಿ ಮಾತ್ರ. ಅಂದರೆ 8 ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ಇದೀಗ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
2 / 5
ಇನ್ನು ಮುಂಬೈ ಇಂಡಿಯನ್ಸ್ ತಂಡಕ್ಕೆ ಉಳಿದಿರುವುದು ಕೇವಲ 3 ಮ್ಯಾಚ್ಗಳು ಮಾತ್ರ. ಈ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮುಂಬೈ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ. ಇದಾಗ್ಯೂ ಹಾರ್ದಿಕ್ ಪಾಂಡ್ಯ ಪಡೆಗೆ ಪ್ಲೇಆಫ್ ಪ್ರವೇಶಿಸಲು ಅವಕಾಶವಿದೆಯಾ ಎಂದು ಕೇಳಿದ್ರೆ, ಉತ್ತರ- 0.0006%
3 / 5
ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲು ಕೇವಲ 0.0006% ಸಾಧ್ಯತೆಗಳಿವೆ. ಅಂದರೆ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡವು 12 ಅಂಕಗಳಲ್ಲೇ ಉಳಿದರೆ ಮಾತ್ರ ಉತ್ತಮ ನೆಟ್ ರನ್ ರೇಟ್ನೊಂದೊಗೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಬಹುದು.
4 / 5
ಆದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ 16 ಅಂಕಗಳನ್ನು ಕಲೆಹಾಕಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ 14 ಅಂಕಗಳನ್ನು ಪಡೆದುಕೊಂಡಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ತಲಾ 12 ಅಂಕಗಳನ್ನು ಹೊಂದಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್ ಕನಸು ಬಹುತೇಕ ಅಂತ್ಯ ಎಂದೇ ಹೇಳಬಹುದು.
5 / 5
ಮುಂಬೈ ಇಂಡಿಯನ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಈ ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ ಮುಂಬೈ ಇಂಡಿಯನ್ಸ್ ತಂಡವು ಅಧಿಕೃತವಾಗಿ ಐಪಿಎಲ್ ಪ್ಲೇಆಫ್ ರೇಸ್ನಿಂದ ಹೊರಬೀಳಲಿದೆ.