AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮೊದಲ ಜಯದೊಂದಿಗೆ 2 ವಿಶ್ವ ದಾಖಲೆ ಬರೆದ ಮುಂಬೈ ಇಂಡಿಯನ್ಸ್

IPL 2024: ಐಪಿಎಲ್ 2024ರ 20ನೇ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಗೆಲುವಿನ ಖಾತೆ ತೆರೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ 29 ರನ್​ಗಳ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ 2 ವಿಶ್ವ ದಾಖಲೆಗಳನ್ನು ಬರೆದಿರುವುದು ವಿಶೇಷ.

TV9 Web
| Edited By: |

Updated on: Apr 08, 2024 | 8:01 AM

Share
ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 13 ಸಾವಿರಕ್ಕೂ ಅಧಿಕ ಪಂದ್ಯಗಳನ್ನಾಡಲಾಗಿದೆ. ಅದರಲ್ಲಿ ಐಪಿಎಲ್​ನಲ್ಲೇ 1200 ಕ್ಕೂ ಅಧಿಕ ಮ್ಯಾಚ್​ಗಳು ನಡೆದಿವೆ. ಆದರೆ ಈ ಬಾರಿ ಇಂದೆಂದೂ ಕಂಡರಿಯದ, ಕೇಳರಿಯದ ರೀತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಪ್ರದರ್ಶನ ನೀಡಿದೆ. ಈ ಪ್ರದರ್ಶನದೊಂದಿಗೆ ವಿಶ್ವ ದಾಖಲೆಯನ್ನೂ ಸಹ ಬರೆದಿದೆ.

1 / 6
ಹೌದು, ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 234 ರನ್​ ಕಲೆಹಾಕಿತು. ವಿಶೇಷ ಎಂದರೆ ಹೀಗೆ ಬೃಹತ್ ಮೊತ್ತ ಪೇರಿಸಿದರೂ ಮುಂಬೈ ಇಂಡಿಯನ್ಸ್ ಪರ ಒಬ್ಬನೇ ಒಬ್ಬ ಅರ್ಧಶತಕ ಬಾರಿಸಿರಲಿಲ್ಲ.

2 / 6
ರೋಹಿತ್ ಶರ್ಮಾ (49), ಇಶಾನ್ ಕಿಶನ್ (42), ಹಾರ್ದಿಕ್ ಪಾಂಡ್ಯ (39), ಟಿಮ್ ಡೇವಿಡ್ (45), ರೊಮೊರಿಯೊ ಶೆಫರ್ಡ್ (39) ಅವರ ಬಿರುಸಿನ ಬ್ಯಾಟಿಂಗ್​ ನೆರವಿನಿಂದ ಮುಂಬೈ ಇಂಡಿಯನ್ಸ್ 234 ರನ್​ ಪೇರಿಸುವಲ್ಲಿ ಯಶಸ್ವಿಯಾಯಿತು. ಇದರೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅರ್ಧಶತಕವಿಲ್ಲದೆ ಅತ್ಯಧಿಕ ರನ್​ ಕಲೆಹಾಕಿದ ತಂಡವೆಂಬ ಕೀರ್ತಿ ಮುಂಬೈ ಇಂಡಿಯನ್ಸ್ ಪಾಲಾಗಿದೆ.

3 / 6
ಇನ್ನು ಈ ಪಂದ್ಯದಲ್ಲಿ 234 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 205 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮುಂಬೈ ಇಂಡಿಯನ್ಸ್ 29 ರನ್​ಗಳ ಭರ್ಜರಿ ಜಯ ಸಾಧಿಸಿತು.

4 / 6
ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ 150 ಪಂದ್ಯಗಳಲ್ಲಿ ಜಯ ಸಾಧಿಸಿದ ವಿಶ್ವದ ಮೊದಲ ತಂಡವೆಂಬ ವಿಶ್ವ ದಾಖಲೆ ಕೂಡ ಮುಂಬೈ ಇಂಡಿಯನ್ಸ್ ಹೆಸರಿಗೆ ಸೇರ್ಪಡೆಯಾಗಿದೆ. ಹಾಗೆಯೇ ಐಪಿಎಲ್​ನಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ ತಂಡಗಳ ಪಟ್ಟಿಯಲ್ಲೂ ಅಗ್ರಸ್ಥಾನದಲ್ಲಿದೆ.

5 / 6
ಒಟ್ಟಿನಲ್ಲಿ ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ಇದೀಗ ಭರ್ಜರಿ ಗೆಲುವಿನೊಂದಿಗೆ ಕಂಬ್ಯಾಕ್ ಮಾಡಿದ್ದು, ಈ ಕಂಬ್ಯಾಕ್​ನೊಂದಿಗೆ 2 ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

6 / 6
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ

ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ

ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು

ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ