IPL 2024: RCB ಗೆಲ್ಲಲ್ಲ, ಪ್ಲೇಆಫ್​ ಪ್ರವೇಶಿಸಲ್ಲ ಎಂದ ಐವರು ಮಾಜಿ ಕ್ರಿಕೆಟಿಗರು

IPL 2024 RCB vs CSK: ಐಪಿಎಲ್​ನಲ್ಲಿ RCB ಮತ್ತು CSK ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 10 ಮ್ಯಾಚ್​ಗಳಲ್ಲಿ ಮಾತ್ರ. ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 21 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

ಝಾಹಿರ್ ಯೂಸುಫ್
|

Updated on:May 16, 2024 | 1:47 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಸೀಸನ್​ 17 ರ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 65 ಪಂದ್ಯಗಳ ಮುಕ್ತಾಯದ ಬಳಿಕ ಪ್ಲೇಆಫ್ ಪ್ರವೇಶಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮಾತ್ರ. ಇನ್ನುಳಿದ 2 ಸ್ಥಾನಗಳಿಗಾಗಿ ಸನ್​ರೈಸರ್ಸ್​ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

1 / 8
ಈ ಪೈಪೋಟಿಯಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 2 ತಂಡಗಳಾವುವು ಎಂಬುದೇ ಕುತೂಹಲ. ಈ ಕುತೂಹಲವನ್ನು ತಣಿಸುವಂತೆ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್, ಅಂಬಾಟಿ ರಾಯುಡು, ಮೊಹಮ್ಮದ್ ಕೈಫ್, ಮ್ಯಾಥ್ಯೂ ಹೇಡನ್ ಮತ್ತು ಟಾಮ್ ಮೂಡಿ ಟಾಪ್-4 ತಂಡಗಳನ್ನು ಹೆಸರಿಸಿದ್ದಾರೆ.

2 / 8
ಚಾನೆಲ್ ಚರ್ಚೆಯಲ್ಲಿ ಈ ಬಗ್ಗೆ ಮಾತನಾಡಿರುವ ಇರ್ಫಾನ್ ಪಠಾಣ್, ಆರ್​ಸಿಬಿ ಮತ್ತು ಸಿಎಸ್​ಕೆ ನಡುವಣ ಮುಖಾಮುಖಿಯಲ್ಲಿ ನನ್ನ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲ್ಲಲಿದೆ. ಈ ಮೂಲಕ ಸಿಎಸ್​ಕೆ ಮತ್ತು ಎಸ್​ಆರ್​ಹೆಚ್ ತಂಡಗಳು ಪ್ಲೇಆಫ್ ಪ್ರವೇಶಿಸಿದೆ. ಅದರಂತೆ ಟಾಪ್-4 ನಲ್ಲಿ ಕೆಕೆಆರ್, ಆರ್​ಆರ್​, ಸಿಎಸ್​ಕೆ, ಎಸ್​ಆರ್​ಹೆಚ್ ತಂಡಗಳು ಕಾಣಿಸಿಕೊಳ್ಳಲಿದೆ ಎಂದಿದ್ದಾರೆ.

3 / 8
ಇನ್ನು ಅಂಬಾಟಿ ರಾಯುಡು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್​, ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದಿದ್ದಾರೆ. ಈ ಮೂಲಕ ಆರ್​ಸಿಬಿ ವಿರುದ್ಧ ಸಿಎಸ್​ಕೆ ತಂಡವೇ ಗೆಲ್ಲಲಿದೆ ಎಂದು ಒತ್ತಿ ಹೇಳಿದ್ದಾರೆ.

4 / 8
ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ಕೂಡ ಇದೇ ಅಭಿಪ್ರಾಯವನ್ನು ಮುಂದಿಟ್ಟಿದ್ದು, ಆರ್​ಸಿಬಿ ವಿರುದ್ಧ ಸಿಎಸ್​ಕೆ ಗೆಲ್ಲುವ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್​, ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದು ತಿಳಿಸಿದ್ದಾರೆ.

5 / 8
ಇನ್ನು ಭಾರತ ತಂಡದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಹ ಸಿಎಸ್​ಕೆ ವಿರುದ್ಧ ಆರ್​ಸಿಬಿ ಗೆಲ್ಲುವುದು ಕಷ್ಟಸಾಧ್ಯ ಎಂದಿದ್ದಾರೆ. ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ಗೆಲ್ಲುವ ಮೂಲಕ ಪ್ಲೇಆಫ್​ ಪ್ರವೇಶಿಸಲಿದೆ. ಈ ಮೂಲಕ ಕೆಕೆಆರ್, ಆರ್​​ಆರ್​, ಎಸ್​ಆರ್​ಹೆಚ್ ಮತ್ತು ಸಿಎಸ್​ಕೆ ಪ್ಲೇಆಫ್ ಪಂದ್ಯಗಳನ್ನಾಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

6 / 8
ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಟಾಮ್ ಮೂಡಿ ಕೂಡ ಕೆಕೆಆರ್, ಆರ್​​ಆರ್​, ಎಸ್​ಆರ್​ಹೆಚ್ ಮತ್ತು ಸಿಎಸ್​ಕೆ ತಂಡಗಳು ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದಿದ್ದಾರೆ. ನಿರ್ಣಾಯಕವಾಗಿರುವ ಪಂದ್ಯದಲ್ಲಿ ಆರ್​ಸಿಬಿಗೆ ಸೋಲುಣಿಸಿ ಸಿಎಸ್​ಕೆ ಪ್ಲೇಆಫ್ ಪ್ರವೇಶಿಸಲಿದೆ ಎಂದು ಟಾಮ್ ಮೂಡಿ ಭವಿಷ್ಯ ನುಡಿದಿದ್ದಾರೆ.

7 / 8
ಅಂದರೆ ಕ್ರಿಕೆಟ್ ವಿಶ್ಲೇಷಕರ ಪ್ರಕಾರ ಆರ್​ಸಿಬಿ ಈ ಬಾರಿ ಪ್ಲೇಆಫ್ ಪ್ರವೇಶಿಸುವುದಿಲ್ಲ. ಇದಾಗ್ಯೂ ಅಂತಿಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದೆಯಾ ಕಾದು ನೋಡಬೇಕಿದೆ.

8 / 8

Published On - 12:07 pm, Thu, 16 May 24

Follow us
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು

ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ

ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ

ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು

ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ

ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ